ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಸಿಲ ಬೇಗೆಯಿಂದ ಬೆಂದಿರುವ ರಾಜ್ಯದ ಜನತೆಗೆ #Rain in Karnataka ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಏಪ್ರಿಲ್ 6ರಿಂದ ನಾಲ್ಕು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಏಪ್ರಿಲ್ 6ರಿಂದ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಏಪ್ರಿಲ್ 6 ರಂದು ದಕ್ಷಿಣಕನ್ನಡ, ಬೀದರ್, ಕಲಬುರಗಿ, ಕೊಡಗು, ಮಂಡ್ಯ ಮತ್ತು ಮೈಸೂರು ಜಿ¯್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
Also read: ರಾಘವೇಂದ್ರ ಅವರಿಗೆ ಸುಳ್ಳಿನ ಸರದಾರ ರಾಷ್ಟ್ರ ಪ್ರಶಸ್ತಿ ನೀಡಬೇಕಾಗಿದೆ: ಮಧು ಬಂಗಾರಪ್ಪ
ಇನ್ನು, ಏಪ್ರಿಲ್ 7ರಂದು ಬೆಂಗಳೂರು, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏಪ್ರಿಲ್ 9 ರಂದು ಕರವಾಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳು ಸೇರಿ 18 ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ವರದಿಯಾಗಿದೆ.
ಇದೇ ವೇಳೆ ಕರಾವಳಿ, ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post