ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ರೂಪಾಂತರಿ ಓಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಠಿಣ ನಿಯಮಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಂಜೆಯೇ ನೂತನ ಮಾರ್ಗಸೂಚಿ ಬಹುತೇಕ ಬಿಡುಗಡೆಯಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿಗಳ ನೇತೃತ್ವದ ಮಹತ್ವದ ಸಭೆಯ ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್. ಅಶೋಕ್, ಇಡೀ ವಿಶ್ವದಲ್ಲಿ 400 ಓಮಿಕ್ರಾನ್ ಪ್ರಕರಣಗಳಿವೆ. ಆದರೆ, ಇದರ ಬಗ್ಗೆ ಅಧ್ಯಯನ ವರದಿ ಬಂದಿಲ್ಲ. ಆದರೆ, ಈ ವೈರಸ್ ತೀವ್ರವಾಗಿ ಬಾಧಿಸಿಯೂ ಇಲ್ಲ. ಈ ನಡುವೆ ರಾಜ್ಯದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೆಲವು ಕಠಿಣ ನಿಯಮಗಳನ್ನು ಜಾರಿಗೊಳಿಸಲು ನಿರ್ಧಸಲಾಗಿದ್ದು, ಈ ಬಗ್ಗೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ನೂತನ ಮಾರ್ಗಸೂಚಿಯನ್ನು ಇಂದು ಸಂಜೆಯೇ ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದರು.
ಸಭೆಯ ಮುಖ್ಯಾಂಶಗಳು:
- ಕೋವಿಡ್ ಪರೀಕ್ಷ ಹೆಚ್ಚಳಕ್ಕೆ ಸೂಚನೆ
- ಶಾಲಾ-ಕಾಲೇಜು ವಿದ್ಯಾರ್ಥಿಗಳ ಪೋಷಕರಿಗೆ ಎರಡು ಡೋಸ್ ಲಸಿಕೆ ಕಡ್ಡಾಯ
- ವಿಮಾನ ನಿಲ್ದಾಣದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ
- ವಿಮಾನ ನಿಲ್ದಾಣದಿಂದ ಹೊರಬರಲು ನೆಗೆಟಿವ್ ವರದಿ ಕಡ್ಡಾಯ
- ಮಾಲ್, ಥಿಯೇಟರ್‌ಗಳಿಗೆ ತೆರಳಲು ಲಸಿಕೆ ಕಡ್ಡಾಯ
- ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿಗಳಿಗೆ ವ್ಯಾಕ್ಸಿನ್ ಕಡ್ಡಾಯ
- ಶಾಲಾ-ಕಾಲೇಜು ಸಮಾರಂಭಗಳಿಗೆ ನಿಷೇಧ
- ರಾಜ್ಯದಲ್ಲಿ ಪ್ರತಿದಿನ ಒಂದು ಲಕ್ಷ ಕೋವಿಡ್ ಪರೀಕ್ಷೆ
- ಮದುವೆಗಳಲ್ಲಿ 500 ಜನರಿಗೆ ಮಾತ್ರ ಅವಕಾಶ
- ರಾಜ್ಯದಾದ್ಯಂತ ಮತ್ತೆ ಕೋವಿಡ್ ಕಂಟ್ರೋಲ್ ರೂಮ್ ಆರಂಭ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post