ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಡೀ ವಿಶ್ವವನ್ನೇ ನಡುಗಿಸುತ್ತಿರುವ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕು ರಾಜ್ಯದ ಇಬ್ಬರಲ್ಲಿ ದೃಢಪಟ್ಟಿದ್ದು ಈ ಮೂಲಕ ದೇಶದಲ್ಲೇ ಮೊದಲ ಎರಡು ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬೆಂಗಳೂರು ಮೂಲದ ಇಬ್ಬರು ವೈದ್ಯರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಇವರಿಗೆ ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆ ಇಲ್ಲ ಎನ್ನುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ನ.19, 20, 21ರಂದು ಬೆಂಗಳೂರಿನಲ್ಲಿ ನಡೆದಿದ್ದ ಕಾನ್ಫರೆನ್ಸ್ ಒಂದರಲ್ಲಿ ಈ ಇಬ್ಬರು ವೈದ್ಯರು ಪಾಲ್ಗೊಂಡಿದ್ದರು. 49 ಮತ್ತು 32 ವರ್ಷದ ಈ ಇಬ್ಬರಲ್ಲಿ ಈಗ ರೂಪಾಂತರಿ ವೈರಸ್ ದೃಢಪಟ್ಟಿದ್ದು, ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಕುರಿತಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post