ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇನ್‌ಸೈಟ್ಸ್ ಐಎಎಸ್ ಬೆಂಗಳೂರು Insight IAS Bangalore ಇವರ ಸಹಯೋಗದಲ್ಲಿ ಹರಿಹರ ತಾಲೂಕಿನ ಬೆಳ್ಳೂಡಿಯಲ್ಲಿ ಜುಲೈ 3ರಂದು ಚಂದ್ರಗುಪ್ತ ಮೌರ್ಯ ಇನ್ಸ್‌ಟಿಟ್ಯೂಷನ್ Chandragupta Mourya Institution ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ ಎಂದು ತರಬೇತಿ ಕೇಂದ್ರದ ಆಡಳಿತ ಮಂಡಳಿ ಸದಸ್ಯರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠ ಆಶ್ರಯದಲ್ಲಿ ನಿರಂಜನಾನಂದಪುರಿ ಮಹಾಸ್ವಾಮಿಯವರ ಆಶೀರ್ವಾದದೊಂದಿಗೆ ಬೆಳ್ಳೂಡಿಯಲ್ಲಿ ಚಂದ್ರಗುಪ್ತ ಮೌರ್ಯ ಇನ್ಸಿಟ್ಯೂಷನ್ ತರಬೇತಿ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಯುಪಿಎಸ್‌ಸಿ, ಕೆಪಿಎಸ್‌ಸಿ ತರಬೇತಿ ಪಡೆಯಲು ಬೆಂಗಳೂರು, ಹೈದರಾಬಾದ್ ಮುಂತಾದ ನಗರಗಳಿಗೆ ಹೋಗಲು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಮುಖ್ಯವಾಗಿ ಮನೆಯಿಂದ ಹೊರಗೆ ಹೆಣ್ಣುಮಕ್ಕಳನ್ನು ಕಳುಹಿಸಲು ಹಿಂಜರಿಯುವ ಪೋಷಕರಿಗೆ ಹಾಗೂ ಉತ್ತರ ಕರ್ನಾಟಕದ ಜನತೆಗೆ ಇದರಿಂದ ಅನುಕೂಲವಾಗಲಿದೆ ಎಂದರು.

Also read: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ
ಈಗಾಗಲೇ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜೂನ್ ೨೬ರಿಂದ ಆನ್‌ಲೈನ್ ಪ್ರವೇಶಾತಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. 2 ಅಂಕದ 100 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದ್ದು, ಪರೀಕ್ಷಾರ್ಥಿಗಳ ಉತ್ತರಪತ್ರಿಕೆಗಳು ಧನಾತ್ಮಕ ಮತ್ತು ಋಣಾತ್ಮಕ (ನಿಯಮಾನುಸಾರ) ಮೌಲ್ಯಮಾಪನದನುಸಾರ ಆಯ್ಕೆ ಮಾಡಲಾಗುತ್ತದೆ. ವಿಶೇಷ ಅರ್ಹತೆಯುಳ್ಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದಲ್ಲಿ ಶೇ.20ರಷ್ಟು ವಿನಾಯಿತಿ ಸೌಲಭ್ಯವಿದೆ. ಪ್ರತಿಯೊಬ್ಬರು ಇದರ ಸದುಪಯೋಗ ಪಡೆಯುವುದರೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕೋರಿದರು.











Discussion about this post