ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ #R Ashok ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು ಕಡೆ ಅವರಿಂದಲೇ ಸರ್ಕಾರಕ್ಕೆ ಮೆಚ್ಚುಗೆ ಹೇಳುವ ಮಾತನ್ನು ಆಡಿಸಲಾಗುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿಯಿಂದ ಮಾರ್ಚ್ 3 ರಂದು ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.

Also read: ಉಸಿರಾಟದ ಸೋಂಕಿನ ಹೊಸ ಅಲೆ | ಮೈಕೋಪ್ಲಾಸ್ಮಾ ನ್ಯೂಮೊನಿಯೆ ಬಗ್ಗೆ ಹೆತ್ತವರೇ ಹುಷಾರ್
ಸಿಎಂ ಸಿದ್ದರಾಮಯ್ಯನವರ #CM Siddaramaiah ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ಬಳಸಿದೆ. ದಲಿತರ ಹಣವನ್ನು ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಮಾತ್ರ ಬಳಸಬೇಕು. ಚುನಾವಣೆ ಸಮಯದಲ್ಲಿ ಎಲ್ಲರಿಗೂ ಫ್ರೀ ಎಂದು ಹೇಳಿ, ಈಗ ದಲಿತರ ಹಣ ಬಳಸಲಾಗುತ್ತಿದೆ. ಬಿಜೆಪಿಯ 40% ಕಮಿಶನ್ ಹಣ ಉಳಿಸಿ ಗ್ಯಾರಂಟಿಗೆ ಬಳಸಲಾಗುವುದು ಎನ್ನಲಾಗಿತ್ತು. ಈಗ ಗುತ್ತಿಗೆದಾರರೇ ಕಾಂಗ್ರೆಸ್ ಸರ್ಕಾರದ ಕಮಿಶನ್ ಬಗ್ಗೆ ಹೇಳಿದ್ದಾರೆ ಎಂದರು.

ಧಮಕಿ ಹಾಕುವುದು, ಗೂಂಡಾಗಿರಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ. ಸಿನಿಮಾ ರಂಗಕ್ಕೆ ಬಿಜೆಪಿ ಸರ್ಕಾರ ಸಾಕಷ್ಟು ನೆರವು ನೀಡಿತ್ತು. ಇಂದು ಅಂಬರೀಶ್ ಅವರು ಇದ್ದಿದ್ದರೆ ಸರಿಯಾಗಿ ಉತ್ತರ ನೀಡುತ್ತಿದ್ದರು. ಸಿನಿಮಾ ರಂಗದವರು ಈ ಹೇಳಿಕೆಯನ್ನು ಖಂಡಿಸಬೇಕು. ಇದು ಕಲಾವಿದರಿಗೆ ಮಾಡುವ ಅಪಮಾನ. ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು, ಶರದ್ ಪವಾರ್, ದೇವೇಗೌಡ ಸೇರಿದಂತೆ ಎಲ್ಲರಿಗೂ ಅಪಾರ ಗೌರವ ನೀಡುತ್ತಾರೆ. ಅವರು ಗೌರವ ನೀಡುವುದರಲ್ಲಿ ಮಾದರಿ. ಡಿ.ಕೆ.ಶಿವಕುಮಾರ್ ಅವರು ಧಮಕಿ ಹಾಕುವುದರಲ್ಲಿ ಮಾದರಿಯಾಗಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post