ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ನವೆಂಬರ್ 11 ರಂದು ಚಾಲನೆ ನೀಡಲಿದ್ದಾರೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ Minister Shashikala Jolle ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾಶಿ ದರ್ಶನ ರೈಲು ಪ್ಯಾಕೇಜ್ ಟೂರ್ ಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಚಾಲನೆ ದೊರೆಯುತ್ತಿರುವುದು ಬಹಳ ಸಂತಸದ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಪುನರ್ ನಿರ್ಮಾಣಗೊಳಿಸಲಾಗಿರುವ ಭವ್ಯ ಕಾಶಿ – ದಿವ್ಯ ಕಾಶಿಯನ್ನು ರಾಜ್ಯದ ಜನರು ಕಡಿಮೆ ವೆಚ್ಚದಲ್ಲಿ ಕಣ್ತುಂಬಿಕೊಳ್ಳಲಿ ಎನ್ನುವ ಪ್ರಮುಖ ಉದ್ದೇಶದಿಂದ ಈ ರೈಲು ಪ್ರವಾಸವನ್ನು ಆಯೋಜಿಸಲಾಗಿದೆ. ನನ್ನ ಆಶಯಕ್ಕೆ ಬೆನ್ನುಲಾಗಿ ನಿಂತ ಮುಖ್ಯಮಂತ್ರಿಗಳಿಗೆ ವಿಶೇಷ ಅಭಿನಂದನೆಗಳನ್ನ ಸಲ್ಲಿಸಿದ್ದೇನೆ ಎಂದಿದ್ದಾರೆ.
ಕಾಶಿ ದರ್ಶನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ಎರಡನೇ ಟ್ರಿಪ್ ಕೂಡಾ ಸೋಲ್ಡ್ ಔಟ್:
ನವೆಂಬರ್ 23, 2022 ರಂದು ಎರಡನೇ ಟ್ರಿಪ್ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಯ ಟ್ರಿಪ್‌ನ ದಿನಾಂಕವನ್ನು ಘೋಷಣೆ ಮಾಡಲಾಗಿತ್ತು. ಟಿಕೆಟ್ ಬುಕ್ಕಿಂಗ್ ಪ್ರಾರಂಭ ಮಾಡಿದ ಎರಡೇ ದಿನಗಳಲ್ಲಿ ಎರಡನೇ ಟ್ರಿಪ್ ನ ಎಲ್ಲಾ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಕಾಶಿ ದರ್ಶನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ದೊರೆಯುತ್ತಿರುವುದು ಬಹಳ ಸಂತಸದ ಸಂಗತಿಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಮುಂದಿನ ಟ್ರಿಪ್‌ಗಳ ದಿನಾಂಕವನ್ನು ಘೋಷಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
Also read: ಶಿರಾಳಕೊಪ್ಪ ಬಳಿ ಸ್ಕಿಡ್ ಆಗಿ ರಸ್ತೆ ಬದಿಗೆ ಹಾರಿದ ಬೈಕ್: ಯುವಕ ಗಂಭೀರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post