ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಕಾಂಗ್ರೆಸ್ ಆಪರೇಷನ್ ಹಸ್ತದ ದುಷ್ಪ್ರಯತ್ನ ಮಾಡುತ್ತಿದೆ. ಆದರೆ, ಅದು ವರ್ಕ್ ಆಗುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ #Minister H D Kumaraswamy ಅವರು ಹೇಳಿದರು.
ಈ ಕುರಿತಂತೆ ಮಾತನಾಡಿದ ಅವರು, ಜೆಡಿಎಸ್ ಮುಗಿಸಬೇಕು ಎಂದು 12 ಜನ ಶಾಸಕರನ್ನು ಕರೆದುಕೊಂಡು ಬನ್ನಿ, 13 ಜನರನ್ನು ಕರೆದುಕೊಂಡು ಬನ್ನಿ ಎನ್ನುವ ಷಡ್ಯಂತ್ರ ನಡೆಯುತ್ತಿದೆ. ಇದೆಲ್ಲವೂ ನನಗೆ ಗೊತ್ತಿದೆ. ನಮ್ಮ ಯಾವ ಶಾಸಕರು ಪಕ್ಷ ಬಿಟ್ಟು ಹೋಗುವ ಪರಿಸ್ಥಿತಿ ಇಲ್ಲ. ಕಾಂಗ್ರೆಸ್ ನವರು ಏನೇನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಿದೆ. ಕಾಂಗ್ರೆಸ್ಸಿನವರ ಪಾಪದ ಕೊಡ ತುಂಬಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದರು ಅವರು.

Also read: ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ, ನಿಖಿಲ್ ಹೆಸರು ಪ್ರಸ್ತಾಪ | ಕುಮಾರಸ್ವಾಮಿ ಹೇಳಿದ್ದೇನು?
ನಾನು ಕಾಂಗ್ರೆಸ್ ಶಾಸಕರಿಗೆ ಮನವಿ ಮಾಡುವುದು ಇಷ್ಟೇ.. ನಿಮ್ಮೆಲ್ಲರಿಗೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ನಿಮ್ಮ ಪಕ್ಷದ ಸರಕಾರ ಹೋಗುತ್ತಿರುವ ಮಾರ್ಗ ಏನು? ಜನರಿಗೆ ನೀವೆಲ್ಲಾ ಏನು ಮಾತು ಕೊಟ್ಟು ಬಂದಿದ್ದೀರಿ? ಆ ಬಗ್ಗೆ ಯೋಚನೆ ಮಾಡಿ ಎಂದು ಹೇಳಿದರು ಕುಮಾರಸ್ವಾಮಿ ಅವರು.

ನಮ್ಮ ಶಾಸಕರ ಬಗ್ಗೆ ನಮಗೆ ಆತಂಕ ಇಲ್ಲ. ಕಾಂಗ್ರೆಸ್ ಏನೆಲ್ಲಾ ಮಾಡುತ್ತಿದೆ ಎಂದು ನಮ್ಮ ಶಾಸಕರು ನನಗೆ ಹೇಳುತ್ತಿದ್ದಾರೆ. ನಮ್ಮ ಪಕ್ಷವನ್ನು ಭದ್ರ ಮಾಡಿಕೊಳ್ಳುವುದು ಹೇಗೆ ಎನ್ನುವುದು ಗೊತ್ತಿದೆ. ಜೆಡಿಎಸ್ ಪಕ್ಷವನ್ನು ಯಾವುದೇ ಶಾಕು.. ವೀಕು ಮಾಡಲು ಆಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post