ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದು ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಒಂದೇ ನಂಬರ್ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್, ಜಂಟಿ ಆಯುಕ್ತೆ ಓಂಕಾರೇಶ್ವರಿ ನೇತೃತ್ವದಲ್ಲಿ ಕೋಲಾರ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕರಾದ ತಿಪ್ಪೇಸ್ವಾಮಿ ಸಿ, ಸುರೇಶ್ ಜಿಎನ್, ಟಿ. ಸುಧೀರ್ ಬಾಬು ಅವರನ್ನೊಳಗೊಂಡಂತ ತಂಡ ಸುಮಾರು 10 ಲಕ್ಷ ತೆರಿಗೆ ವಂಚಿಸಿ ಒಂದೇ ನಂಬರ್ ಬಳಸಿಕೊಂಡು ಹಾಗೂ ಕರ್ನಾಟಕ ರಾಜ್ಯಕ್ಕೆ ನೀಡಬೇಕಾದ ತೆರಿಗೆಯನ್ನು ನೀಡದೆ, ನಕಲಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಂಡು ಸಂಚರಿಸುತ್ತಿದ್ದ ನಾಲ್ಕು ಬಸ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ದೂರನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post