ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪೆಹಲ್ಗಮ್ ದಾಳಿಯಲ್ಲಿ #Pehalgam Terror Attack ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್ ‘ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ #Zameer Ahmed Khan ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಭಾರತೀಯ ಸೇನೆಯ #Indian Army ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನ ಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನ ಕ್ಕೆ ಉಳಿಗಾಲ ಇಲ್ಲ ಎಂಬ ಸಂದೇಶ ರವಾನೆ ಯಾಗಿದೆ. ‘ನಮ್ಮ ಸೇನೆ ನಮ್ಮ ಹೆಮ್ಮೆ’ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post