ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೆಹಲಿಯಲ್ಲಿ ಗಣರೋಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ Republic day pared Karnataka tableau ಅವಕಾಶ ಲಭಿಸಿದ್ದು, 2023ರ ಸ್ತಬ್ಥಚಿತ್ರದಲ್ಲಿ ಕರ್ನಾಟಕವು ಮಂಡಿಸಿದ್ದ ನಾರಿಶಕ್ತಿ ವಿಷಯದ ವಿನ್ಯಾಸದ ಮಾದರಿ ಪ್ರದರ್ಶನಗೊಳ್ಳಲಿದೆ.
ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ಸಾಲುಮರದ ತಿಮ್ಮಕ್ಕ ಮತ್ತು ತುಳಸಿಗೌಡ ಹಾಲಕ್ಕಿ ಅವರ ಸಾಧನೆಗಳನ್ನು ಬಿಂಬಿಸುವ ಕರ್ನಾಟಕದ ‘ನಾರಿ ಶಕ್ತಿ ವಿಷಯದ ಸ್ತಬ್ಧ ಚಿತ್ರ ದೆಹಲಿ ಪರೇಡ್ನಲ್ಲಿ ಕಾಣಿಸಿಕೊಳ್ಳಲಿದೆ.
ಇತರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಕರ್ನಾಟಕವನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು. ಈ ಸಂಬಂಧ ನಡೆದ ನಾಲ್ಕು ಸಭೆಗಳಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಸಂಬಂಧ ಒಪ್ಪಿಗೆ ಸೂಚಿಸಿದ ಕೇಂದ್ರ ಸರ್ಕಾರ, ಐದನೇ ಸಭೆಯಲ್ಲಿ ಕರ್ನಾಟಕವನ್ನು ಕೈಬಿಟ್ಟಿತ್ತು. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ರಾಜ್ಯಾದ್ಯಂತ ತೀವ್ರ ಜನಾಕ್ರೋಶ ವ್ಯಕ್ತವಾಗಿತ್ತು. ಕೊನೆ ಕ್ಷಣದಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post