No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷ ನಾಯಕ ಆರ್‌. ಅಶೋಕ ಆಗ್ರಹ

kalpa News by kalpa News
July 17, 2024
in ಬೆಂಗಳೂರು ನಗರ
0
ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ, ಶತಕೋಟಿ ಭಾರತೀಯರಿಗೆ ಸೇರಿದ್ದು: ಆರ್. ಅಶೋಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ #R Ashok ಆಗ್ರಹಿಸಿದರು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ #Valmiki Corporation Scam ಕುರಿತು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ವಸಂತನಗರದ ಯೂನಿಯನ್‌ ಬ್ಯಾಂಕ್‌ ಹಾಗೂ ಎಂಜಿ ರಸ್ತೆಯ ಬ್ಯಾಂಕ್‌ ಖಾತೆಗೆ ಹಣ ಹಾಕಲಾಗಿದೆ. ಎರಡು ಖಾತೆ ತೆರೆಯಬಾರದು ಎಂದು ಸರ್ಕಾರವೇ ಆದೇಶ ಮಾಡಿರುವಾಗ ಅದನ್ನು ಉಲ್ಲಂಘಿಸಲಾಗಿದೆ. ಕಳ್ಳತನ ಆಗಿರುವುದೇ 187 ಕೋಟಿ ರೂ. ಎಂದಿರುವಾಗ ಅದು 89 ಕೋಟಿ ರೂ. ಎಂದು ಹೇಳಲು ಸಾಧ್ಯವಿಲ್ಲ. ಇದಕ್ಕಾಗಿಯೇ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸು ಇಲಾಖೆಯವರು ತಮಗೆ ಗೊತ್ತಿರಲಿಲ್ಲ ಎಂದು ಹೇಳಿದರೂ ಅದು ದೊಡ್ಡ ತಪ್ಪು ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ನಿಯೋಜಿಸಲಾಗಿದೆ. ಹಾಗೆಯೇ ಎಚ್‌.ಡಿ.ರೇವಣ್ಣ, ಪ್ರಜ್ವಲ್‌ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ತನಿಖೆಗೆ ವಿಶೇಷ ತನಿಖಾ ದಳ ನಿಯೋಜಿಸಲಾಗಿದೆ. ಎಸ್‌ಐಟಿ ತನಿಖೆ ಆರಂಭವಾದಾಗಲೇ ಅವರು ಭಯಗೊಂಡು ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ ನಿಗಮದ ತನಿಖೆ ಆರಂಭವಾದಾಗ ಸಚಿವರಿಗೆ ಹಾಗೂ ಅಧ್ಯಕ್ಷರಿಗೆ ಯಾವುದೇ ಭಯ ಇರಲಿಲ್ಲ. “ಸಿಬಿಐ ತನಿಖೆಯಾದರೆ ಎರಡು ವರ್ಷ ಜೈಲು ಹಾಗೂ ನಮ್ಮವರು ಬಂದರೆ ಬಿಡುಗಡೆ” ಎಂದು ಬಿಡುಗಡೆಯಾದ ಆಡಿಯೋದಲ್ಲಿ ಅಧಿಕಾರಿಗಳು ಮಾತಾಡಿದ್ದಾರೆ. ನಿಗಮದ ಹಗರಣದ ತನಿಖೆಯಲ್ಲಿ ಎಸ್‌ಐಟಿ ಸಂಪೂರ್ಣ ವಿಫಲವಾಗಿದೆ ಎಂದರು.

ಬೇನಾಮಿ ಹಣ ಬಂದ ಕೂಡಲೇ ಸಹಜವಾಗಿ ಇಲ್ಲಿ ಜಾರಿ ನಿರ್ದೇಶನಾಲಯ ಬಂದು ತನಿಖೆ ಮಾಡಿದೆ. ಹಾಗೆಯೇ ಸಿಬಿಐ ಕೂಡ ಕಾನೂನು ಪ್ರಕಾರ ಮಧ್ಯಪ್ರವೇಶ ಮಾಡಿ ತನಿಖೆ ಮಾಡುತ್ತಿದೆ. ಆದರೆ ಎಸ್‌ಐಟಿಯನ್ನು ಕಾಂಗ್ರೆಸ್‌ ಸರ್ಕಾರ ನೇಮಿಸಿದ್ದು, ತನಿಖೆ ವೇಗವಾಗಿ ನಡೆದಿಲ್ಲ. ಇಲ್ಲಿ ತಾರತಮ್ಯ ನಡೆದಿದೆ ಎಂದರು.
ಪರಿಶೀಲನೆ ಇಲ್ಲ
ನಿಗಮದಲ್ಲಿ ಸೆಪ್ಟೆಂಬರ್‌ ತಿಂಗಳಲ್ಲಿ ಕ್ರಿಯಾಯೋಜನೆಗೆ ಆದೇಶ ಹೊರಡಿಸಿ ಐದು ತಿಂಗಳಾದರೂ ಅದನ್ನು ಇಲಾಖೆಯ ಕಾರ್ಯದರ್ಶಿ ಪರಿಶೀಲನೆ ಮಾಡಿಲ್ಲ. ಪರಿಶಿಷ್ಟ ಪಂಗಡಕ್ಕೆ ನೀಡಿದ ಈ ಯೋಜನೆಯ ಪ್ರಗತಿ ಎಷ್ಟೆಂದು ತಿಳಿಯುವ ಪ್ರಯತ್ನವೇ ನಡೆದಿಲ್ಲ. ತಳ್ಳು ಗಾಡಿ ಬರುತ್ತದೆಂದು ಕಾಯುತ್ತಿದ್ದ ವ್ಯಕ್ತಿಗೆ ಹಣ ತಲುಪಲೇ ಇಲ್ಲ. ಹಿಂದಿನ ಬಜೆಟ್‌ನಲ್ಲಿ ನೀಡಿದ ಹಣವನ್ನು ಏಕೆ ಖರ್ಚು ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಪ್ರಶ್ನಿಸಬೇಕಿತ್ತು. ಆಗಲೇ ಪ್ರಶ್ನೆ ಮಾಡಿದ್ದರೆ ಫಲಾನುಭವಿಗಳಿಗೆ ಅನುಕೂಲವಾಗುತ್ತಿತ್ತು ಎಂದರು.

Also read: ಪವರ್ ಲಿಫ್ಟಿಂಗ್ ಸ್ಪರ್ಧೆ: ಪೆಸಿಟ್‌ನ್ ಸುಮನ್‌ಗೆ ಚಿನ್ನದ ಪದಕ

ಹಗರಣವಾಗಿದೆ ಎಂದು ಗೊತ್ತಾದಾಗ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಇದು ತಮ್ಮ ವ್ಯಾಪ್ತಿಯದ್ದಲ್ಲ ಎಂದು ಹೇಳಿದರು. ಆರ್ಥಿಕ ಇಲಾಖೆಯವರೂ ಇದನ್ನೇ ಹೇಳಿದರು. ಮುಖ್ಯಮಂತ್ರಿಯನ್ನು ಕೇಳಿದರೆ ಇದು ನನಗೆ ಸಂಬಂಧವಿಲ್ಲ ಎಂದರು. ಹೀಗೆ ಯಾರೂ ಒಪ್ಪಿಕೊಳ್ಳದೆ ಮತ್ತೊಬ್ಬರ ಮೇಲೆ ತಪ್ಪು ಹೇರುವ ಕೆಲಸ ಮಾಡಿದ್ದಾರೆ. ಇದು ಹೊಣೆ ಇಲ್ಲದ ಸರ್ಕಾರ ಎಂದು ದೂರಿದರು.

ಎಲ್ಲ ಶಾಸಕರಿಗೆ ಸಂಬಂಧಿಸಿದ್ದು
ಇದು 224 ಶಾಸಕರಿಗೂ ಸಂಬಂಧಪಟ್ಟ ಸಂಗತಿ. ಒಂದು ವರ್ಷದಿಂದ ನಿಗಮದಿಂದ ದಲಿತರಿಗೆ 187 ಕೋಟಿ ರೂ. ಮೊತ್ತದ ಯೋಜನೆ ಸಿಕ್ಕಿಲ್ಲ. ಈ ಹಣವನ್ನು ಮುಖ್ಯಮಂತ್ರಿಯೇ ನೀಡಬೇಕು. ಇದಕ್ಕೆ ಯಾರು ಜವಾಬ್ದಾರಿ? ಯೋಜನೆ ಮುಂದುವರಿಸುವುದಕ್ಕೆ ಯಾರನ್ನು ಹೊಣೆಗಾರರಾಗಿ ಮಾಡುತ್ತಾರೆ? ಇದು ಕ್ಷೇತ್ರದ ಮತದಾರರಿಗೆ ತಲುಪಬೇಕಾದ ಹಣ. ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಮನೆಗೆ ಹೋಗಿ ಒಂದು ದಿನ ವಾಸ್ತವ್ಯ ಮಾಡಲಿ. ದಲಿತರು ಎಷ್ಟು ಕಷ್ಟ ಪಡುತ್ತಾರೆ ಎಂದು ಗೊತ್ತಾಗುತ್ತದೆ. ಅಂತಹ ಜನರ ಹಣವನ್ನು ಕದ್ದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರನ್‌ ಕುಟುಂಬ ಬೀದಿಗೆ ಬಂದಿದೆ ಎಂಬ ಸುದ್ದಿ ಪತ್ರಿಕೆಯಲ್ಲಿ ಬಂದಿದೆ. ಆ ಮನೆಯನ್ನೇ ಕುಟುಂಬದವರು ಖಾಲಿ ಮಾಡಿ ಹೋಗಿದ್ದಾರೆ. ಆ ಕುಟುಂಬವೀಗ ಬೀದಿಗೆ ಬಂದಿದೆ. ಸಚಿವರು ಬಂದು ಸಮಾಧಾನ ಹೇಳಿದ್ದಾರೆಯೇ ಹೊರತು, ಏನೂ ಪರಿಹಾರ ಸಿಕ್ಕಿಲ್ಲ ಎಂದು ಮೃತ ಅಧಿಕಾರಿಯ ಪತ್ನಿ ಹೇಳಿದ್ದಾರೆ. ಇದೇ ರೀತಿ ನಮ್ಮ ಮನೆಯ ಹೆಣ್ಣುಮಕ್ಕಳಿಗೆ ಆಗಿದ್ದರೆ ಸಹಿಸಿಕೊಳ್ಳುತ್ತಿದ್ದೆವಾ? ಎಂದು ಪ್ರಶ್ನಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaR AshokValmiki Corporation Scamಆರ್. ಅಶೋಕಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪವರ್ ಲಿಫ್ಟಿಂಗ್ ಸ್ಪರ್ಧೆ: ಪೆಸಿಟ್‌ನ್ ಸುಮನ್‌ಗೆ ಚಿನ್ನದ ಪದಕ

Next Post

ಬಡತನ ನಿರ್ಮೂಲನೆಗಾಗಿ ಕೆಎಲ್ ಐಪಿ ಅನುಷ್ಠಾನ: ಸಚಿವ ಶರಣಪ್ರಕಾಶ್ ಪಾಟೀಲ್

kalpa News

kalpa News

Next Post
ಬಡತನ ನಿರ್ಮೂಲನೆಗಾಗಿ ಕೆಎಲ್ ಐಪಿ ಅನುಷ್ಠಾನ: ಸಚಿವ ಶರಣಪ್ರಕಾಶ್ ಪಾಟೀಲ್

ಬಡತನ ನಿರ್ಮೂಲನೆಗಾಗಿ ಕೆಎಲ್ ಐಪಿ ಅನುಷ್ಠಾನ: ಸಚಿವ ಶರಣಪ್ರಕಾಶ್ ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL