No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿಂಚಣಿ ಪರಿಷ್ಕರಣೆಗಾಗಿ ಸಂಘಟಿತ ಹೋರಾಟ: ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 30, 2023
in ಶಿವಮೊಗ್ಗ
0
ಪಿಂಚಣಿ ಪರಿಷ್ಕರಣೆಗಾಗಿ ಸಂಘಟಿತ ಹೋರಾಟ: ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ, ಭಾರತೀಯ ಬ್ಯಾಂಕುಗಳ ಸಂಘ, ಕೇಂದ್ರ ಹಣ ಕಾಸು ಸಚಿವರು ಒಪ್ಪಿಗೆ ನೀಡಿದ್ದರೂ ಸಹಾ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಹೀಗಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೋರಾಟ ತೀವ್ರಗೊಳಿಸಲು ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟ ನಿರ್ಣಯ ಕೈಗೊಂಡಿದೆ.

ಜಯನಗರ ಸೌತ್ ಎಂಡ್ ಸರ್ಕಲ್ ನ ವಿಜಯಾ ಕಾಲೇಜಿನ ಸಭಾಂಗಣದಲ್ಲಿ ನಡೆದ ಒಕ್ಕೂಟದ ನಾಲ್ಕನೇ ತ್ರೈಮಾಸಿಕ ಸಮ್ಮೇಳನದಲ್ಲಿ ಸಂಘಟಿತ ಹೋರಾಟಕ್ಕೆ ಕರೆ ನೀಡಿದೆ. ಕರ್ನಾಟಕ ರಾಜ್ಯ ನಿವೃತ್ತ ಬ್ಯಾಂಕ್‌ ನೌಕರರ ಒಕ್ಕೂಟದ ಅಧ್ಯಕ್ಷ ಕಾಂ. ಬಿ. ದೇವದಾಸ ರಾವ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಸ್. ಸಿ. ಜೈನ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ಕಳೆದ ಮೂವತ್ತು ವರ್ಷಗಳಿಂದ ನಿವೃತ್ತರಿಗೆ ಪಿಂಚಣಿ ಪರಿಷ್ಕರಿಸಿಲ್ಲ. ಎರಡು ದಶಕಗಳಿಂದ ಹೋರಾಟ ಮಾಡುತ್ತಿದ್ದರೂ ಕೊಟ್ಟ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸುತ್ತಿಲ್ಲ ಎಂದರು.

ಕರ್ನಾಟಕ ರಾಜ್ಯ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಯ ಸಂಚಾಲಕ ಕೆ. ಎನ್. ಗಿರಿರಾಜ್‌ ಮಾತನಾಡಿ, ನಿವೃತ್ತರ ಬೇಡಿಕೆಗಳು ನ್ಯಾಯಯುತವಾಗಿದ್ದು, ಬ್ಯಾಂಕ್ ಸಂಘಟಗಳ ಸಂಯುಕ್ತ ವೇದಿಕೆ ಪಿಂಚಣಿ ಪರಿಷ್ಕರಣೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಹೋರಾಟ ತೀವ್ರಗೊಳಿಸಲಿದೆ ಎಂದರು.

http://kalpa.news/wp-content/uploads/2023/05/Jain-Public-School.mp4

ಅಖಿಲ ಭಾರತ ಬ್ಯಾಂಕ್ ಪೆನ್ಷನೆರ್ಸ್ ಅಂಡ್ ರಿಟೈರೀಸ್ ಕಾನ್ಫಡೆರೇಷನ್ ಕಾರ್ಯಾಧ್ಯಕ್ಷ ಎ. ಎನ್. ಕೃಷ್ಣ ಮೂರ್ತಿ ಮಾತನಾಡಿ, ಬ್ಯಾಂಕ್ ನಿವೃತ್ತರೆಲ್ಲರೂ ಒಟ್ಟಾಗಿ ಹೋರಾಟ ಮಾಡಿದರೆ ಬೇಡಿಕೆ ಈಡೇರಲಿದೆ ಎಂದರು.

ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘದ ಅಧ್ಯಕ್ಷ ಎ. ಎನ್. ಸುರೇಶ್ ಮಾತನಾಡಿ, ಪಿಂಚಣಿ ಪರಿಷ್ಕರಣೆ ವಿಷಯವನ್ನು ಅಧ್ಯತೆಯ ಮೇಲೆ ಭಾರತೀಯ ಬ್ಯಾಂಕುಗಳ ಸಂಘದೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸಲು ಹೋರಾಟ ಮಾಡುವುದಾಗಿ ತಿಳಿಸಿದರು.

ಕರ್ನಾಟಕ ಬ್ಯಾಂಕ್‌ ನೌಕರರ ಸಂಘದ ಪ್ರಮುಖರಾದ ಕೆ. ಚಂದ್ರ ಶೇಖರ್ ಮಾತನಾಡಿ, ಕೇಂದ್ರ ಸರ್ಕಾರವು ತಾರತಮ್ಯ ನೀತಿಯನ್ನು ಕೈಬಿಟ್ಟು ರಿಸರ್ವ್ ಬ್ಯಾಂಕ್ ಮಾದರಿಯಲ್ಲಿ ಬ್ಯಾಂಕ್ ನಿವೃತ್ತರ ಪಿಂಚಣಿಯನ್ನು ಕೂಡಲೇ ಪರಿಷ್ಕರಿಸಬೇಕು. ಹೋರಾಟವನ್ನು ನಿರ್ಣಾಯಕ ಹಂತಕ್ಕೆ ಕೊಂಡಯ್ಯಲಾಗುವುದು ಎಂದರು.
ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟದ ಪದಾಧಿಕಾರಿಗಳಾದ ಎನ್. ಟಿ. ಹೆಗ್ಡೆ, ಯು. ಅಬ್ದುಲ್ ಜಲೀಲ್, ರತ್ನಾ ಉತ್ತಪ್ಪ, ಸುಧಾಕರ ಶೆಟ್ಟಿ, ವಿಶ್ವನಾಥ ನಾಯ್ಕ್, ವೆಂಕಟರಾವ್ ಮತ್ತು ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟದ ಉಪ ಪ್ರಧಾನ ಕಾರ್ಯದರ್ಶಿ ಎಂ. ಎಸ್. ಭಟ್ ಮತ್ತು ಇತರೆ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

ಚಿತ್ರಶೀರ್ಷಿಕೆ; ಕರ್ನಾಟಕ ರಾಜ್ಯ ನಿವೃತ್ತ ಬ್ಯಾಂಕ್ ನೌಕರರ ಒಕ್ಕೂಟದ ನಾಲ್ಕನೇ ತ್ರೈಮಾಸಿಕ ಸಮ್ಮೇಳನ ಜಯನಗರದ ವಿಜಯ ಕಾಲೇಜು ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷ ಕಾಂ. ಬಿ. ದೇವದಾಸ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು. ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಸ್. ಸಿ. ಜೈನ್, ಕರ್ನಾಟಕ ರಾಜ್ಯ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಯ ಸಂಚಾಲಕ ಕೆ. ಎನ್. ಗಿರಿರಾಜ್‌, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘದ ಅಧ್ಯಕ್ಷ ಎ. ಎನ್. ಸುರೇಶ್ ಮತ್ತಿತರರು ಪಾಲ್ಗೊಂಡರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Previous Post

ಮೇ 31ರಂದು ನೂತನ ಸಚಿವ ಮಧು ಬಂಗಾರಪ್ಪ ಶಿವಮೊಗ್ಗಕ್ಕೆ

Next Post

ಕಷ್ಟ ಸುಖಗಳನ್ನು ಸಮನಾಗಿ ಸ್ವೀಕರಿಸಿ ಜೀವನ ಎದುರಿಸಿದರೆ ಸಾರ್ಥಕತೆ: ಸತ್ಯಾತ್ಮ ತೀರ್ಥ ಸ್ವಾಮೀಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಷ್ಟ ಸುಖಗಳನ್ನು ಸಮನಾಗಿ ಸ್ವೀಕರಿಸಿ ಜೀವನ ಎದುರಿಸಿದರೆ ಸಾರ್ಥಕತೆ: ಸತ್ಯಾತ್ಮ ತೀರ್ಥ ಸ್ವಾಮೀಜಿ

ಕಷ್ಟ ಸುಖಗಳನ್ನು ಸಮನಾಗಿ ಸ್ವೀಕರಿಸಿ ಜೀವನ ಎದುರಿಸಿದರೆ ಸಾರ್ಥಕತೆ: ಸತ್ಯಾತ್ಮ ತೀರ್ಥ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

May 14, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL