ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಡವರ, ಮಧ್ಯಮ ವರ್ಗದವರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆ ವೇಗ ಪಡೆದುಕೊಳ್ಳುತ್ತದೆ. ಶ್ರೀಮಂತರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆಗೆ ಅಷ್ಟು ಲಾಭ ಆಗುವುದಿಲ್ಲ. ಆದ್ದರಿಂದ ನಾವು ಬಡವರು, ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ರಾಜ್ಯ ಸರ್ಕಾರದ ಮಹತ್ವದ ‘ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಬಳಿಕ ವಿಧಾನಸೌಧದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಈ 20 ದಿನಗಳಲ್ಲಿ ಬಿಜೆಪಿ ಪರಿವಾರ ಸುಳ್ಳಿನ ಮಹಾಪೂರವನ್ನೇ ಹರಿಸಿತು. ನಾವು ವಿಚಲಿತರಾಗಲಿಲ್ಲ. ನಮ್ಮ ಗುರಿ “ನುಡಿದಂತೆ ನಡೆಯುವುದಾಗಿತ್ತು”. ಅದನ್ನು ಮಾಡಿದ್ದೇವೆ. ಮಹಿಳೆಯರನ್ನು ಸಶಕ್ತಗೊಳಿಸುವ ಉದ್ದೇಶದಿಂದ ಈ ಯೋಜನೆಗೆ “ಶಕ್ತಿ” ಎಂದು ಹೆಸರಿಡಲಾಗಿದೆ. ದೇಶದ ಅರ್ಧದಷ್ಟಿರುವ ಮಹಿಳೆಯರು ಅಭಿವೃದ್ಧಿಯಲ್ಲಿ ಪಾಲುದಾರರಾಗದೆ ದೇಶದ ಪ್ರಗತಿ ಸಾಧ್ಯವಿಲ್ಲ. ಭಾರತದಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಕಡಿಮೆ ಆಗಿದೆ. ಈ ಪ್ರಮಾಣ ಹೆಚ್ಚಾಗಬೇಕು ಎಂದರು.

ಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ವಿಧಾನ ಪರಿಷತ್ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಪರಿಷತ್ ಸದಸ್ಯ ನಾಗರಾಜ ಯಾದವ್, ಕಾಂಗ್ರೆಸ್ ಮುಖಂಡರಾದ ರೇವಣ್ಣ, ಯು.ಬಿ.ವೆಂಕಟೇಶ್ ಸೇರಿ ಇತರರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post