ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಮಜನ್ಮ ಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ರಾಮನಿಗೂ ಕರ್ನಾಟಕಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಭೂಮಿ ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ Ayodhya Shrirama Pranaprathishte ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾಲಬ್ರೂಹಿ ಅತಿಥಿ ಗೃಹದ ಬಳಿ ಇರುವ ಮಾರುತಿ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಭಾರತದ ಇತಿಹಾಸದಲ್ಲಿ ಮಹತ್ವದ ಭಕ್ತಿ ಭಾವದ ದಿನ, ಐತಿಹಾಸಿಕ ದಿನ. ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಟಾಪನೆ ದಿನ ಎಂದರು.

Also read: ಸೇನೆಯಲ್ಲಿ ಸ್ತ್ರೀಯರಿಗೆ ಅವಕಾಶ ಮೊದಲು ನೀಡಿದ್ದು ನೇತಾಜಿ: ನವೀನ್ ಸುಬ್ರಹ್ಮಣ್ಯ ಅಭಿಮತ
ರಾಮಜನ್ಮಭೂಮಿ ಹೋರಾಟದಲ್ಲಿ ಕರ್ನಾಟಕದ ದೊಡ್ಡ ಪಾತ್ರವಿದೆ. ರಾಮನಿಗೂ ಕರ್ನಾಟಕಕ್ಕೂ ನಂಟಿದೆ. ಆಂಜನೇಯ ಜನ್ಮಸ್ಥಳ ಆಂಜನಾದ್ರಿ ಕರ್ನಾಟಕದಲ್ಲೇ ಇದೆ ಆಂಜನೇಯ ಇದ್ದರೆ ರಾಮ ಪರಿಪೂರ್ಣ. ಮುಂದಿನ ನಮ್ಮ ಗುರಿ ಆಂಜನೇಯ ಜನ್ಮ ಭೂಮಿ ಅಭಿವೃದ್ಧಿ ಮಾಡುವುದು ಮುಂದಿನ ದಿನಗಳಲ್ಲಿ ಆಂಜನೇಯ ಕ್ಷೇತ್ರ ಅಭಿವೃದ್ಧಿ ಮಾಡಬೇಕು ಅಂತ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ.
ರಾಮ ರಾಜ್ಯ ಸ್ಥಾಪನೆ ನಮ್ಮ ಮುಂದಿನ ಗುರಿ. ಇದು ಅಮೃತ ಘಳಿಗೆ.ಇಂಥ ಐತಿಹಾಸಿಕ ಸಂದರ್ಭದಲ್ಲಿ ನಾವಿದ್ದೇವೆ ಎನ್ನುವುದು ನಮ್ಮ ಖುಷಿ. ಇಂಥ ಪವಿತ್ರವಾದ ದಿನ ನಾವು ರಾಜಕೀಯ ಬೆರೆಸಿ ಮಾತನಾಡುವುದಿಲ್ಲ ಎಂದು ಹೇಳಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post