No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಮ್ಲಜನಕ ಮತ್ತು ರೆಮ್ ಡಿಸಿವರ್ ಹೆಚ್ಚುವರಿ ಪೂರೈಕೆ: ಪ್ರಧಾನಿ ಭರವಸೆ

kalpa News by kalpa News
April 23, 2021
in ಬೆಂಗಳೂರು ನಗರ
0
ಐತಿಹಾಸಿಕ ಕ್ಷಣಕ್ಕೆ ದೇಶ ಸಾಕ್ಷಿ: ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿಸುವಂತೆ ಪ್ರಧಾನಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದರು.

ಅವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ವಿಷಯ ತಿಳಿಸಿದರು. ಈಗ ಎದುರಾಗಿರುವ ವಿಪತ್ತನ್ನು ಎದುರಿಸಲು ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು, ಮುನ್ನೆಚ್ಚರಿಕೆಯ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಅನಗತ್ಯ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುವುದು ಹಾಗೂ ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅತಿ ಅಗತ್ಯ ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.

ಆಮ್ಲಜನಕದ ದುರ್ಬಳಕೆ ಯಾಗದಂತೆ ಎಲ್ಲ ರಾಜ್ಯಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸುವಂತೆ ಪ್ರಧಾನ ಮಂತ್ರಿಯವರು ಸಲಹೆ ನೀಡಿದರು. ಜೊತೆಗೆ ಆಮ್ಲಜನಕದ ಟ್ಯಾಂಕರು ಗಳ ಸುಗಮ ಸಂಚಾರಕ್ಕೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಆಮ್ಲಜನಕ ಮತ್ತು ರೆಮ್ ಡಿಸಿವಿರ್ ಸದ್ಬಳಕೆಯಾಗುವ ನಿಟ್ಟಿನಲ್ಲಿ ಆತಂಕದ ಕೊಳ್ಳುವಿಕೆಯನ್ನು ನಿಯಂತ್ರಿಸುವಂತೆ ಅವರು ಸಲಹೆ ಮಾಡಿದರು. ಹೆಚ್ಚುತ್ತಿರುವ ಪ್ರಕರಗಳಿಂದಾಗ ಮಾನವ ಸಂಪನ್ಮೂಲ ಅಗತ್ಯತೆಯೂ ಹೆಚ್ಚುತ್ತಿದ್ದು, ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಕೆ ಮಾಡಿಕೊಳ್ಳಿ ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.

ಆಮ್ಲಜನಕ ಪೂರೈಕೆಗೆ ಮನವಿ:
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಿದರು.

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯಕ್ಕೆ ದಿನಕ್ಕೆ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಆಮ್ಲಜನಕದ ಬಳಕೆ ದಿನೇ ದಿನೇ ಹೆಚ್ಚುತ್ತಿದ್ದು, ನಿನ್ನೆ ರಾಜ್ಯದಲ್ಲಿ 500 ಟನ್ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗುವುದು. ಭಾರತ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಏಪ್ರಿಲ್ 25 ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ ಹಾಗೂ ಏಪ್ರಿಲ್ 30ರ ನಂತರ 1471 ಟನ್ ಆಮ್ಲಜನಕದ ಅಗತ್ಯವಿದೆ. ಆಮ್ಲಜನಕ ಕೊರತೆ ನೀಗಿಸಿ, ಕೂಡಲೇ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪಾಸಿಟಿವಿಟಿ ದರ ಶೇ. 16 ರಷ್ಟಿದೆ. ಬೆಂಗಳೂರು ನಗರ ಅತಿ ಹೆಚ್ಚು ಪೀಡಿತವಾಗಿದ್ದು, ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ತಡೆಯಲು ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಜೊತೆಗೆ ಇತರ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ರಾಜ್ಯದ ಆರ್ಥಿಕ ಚಟುವಟಿಕೆಗಳ ಮೇಲೆ ಕನಿಷ್ಠ ಪರಿಣಾಮವಾಗುವ ರೀತಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕಳೆದ ಆರು ತಿಂಗಳಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸಿದ್ದು, ಇದೀಗ ಅನುಕೂಲವಾಗಿದೆ. ಸರ್ಕಾರದ ಶಿಫಾರಸಿನ ಮೇರೆಗೆ ರೋಗಿಗಳನ್ನು ದಾಖಲಿಸಲು ಖಾಸಗಿ ಆಸ್ಪತ್ರೆಗಳ ಶೇ. 50 ರಷ್ಟು ಹಾಸಿಗೆಗಳನ್ನು ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಬಂದರೆ ಅನುವಾಗುವಂತೆ ಖಾಸಗಿ ಆಸ್ಪತ್ರೆಗಳು ಸಮೀಪದ ಹೋಟೆಲ್ ಗಳ ಸಹಯೋಗದೊಂದಿಗೆ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ. ಐಸಿಯು ಸೌಲಭ್ಯಗಳಿರುವ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ಸಹ ಚಿಂತನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ರೆಮ್ ಡಿಸಿವಿರ್ ಕೊರತೆಯಾಗದಂತೆ ಎಚ್ಚರ ವಹಿಸಲಾಗುತ್ತಿದ್ದು, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್ ಗಳಷ್ಟು ರೆಮ್ ಡಿಸಿವಿರ್ ಒದಗಿಸುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಮುಖ್ಯಮಂತ್ರಿಗಳು, ನಗರದ 8 ವಲಯಗಳ ಕೋವಿಡ್ ನಿರ್ವಹಣೆ ಉಸ್ತುವಾರಿಗೆ ಸಚಿವರನ್ನು ನೇಮಕ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಲಸಿಕೆ ಕಾರ್ಯಕ್ರಮದ ಪ್ರಗತಿಯೂ ಉತ್ತಮವಾಗಿದ್ದು, ಈವರೆಗೆ 82 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಮೇ 1 ರಿಂದ ಹೊಸ ಲಸಿಕಾ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೂ ಲಸಿಕೆಗಳು ಸಮಾನವಾಗಿ ಹಂಚಿಕೆಯಾಗುವಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreCM YadiyurappaCovidKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPM Narendra ModiRem DciverState Newsಕೋವಿಡ್ಪ್ರಧಾನಂತ್ರಿ ನರೇಂದ್ರ ಮೋದಿಬೆಂಗಳೂರುಮುಖ್ಯಮಂತ್ರಿ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರ್ಮಿಕರು ಇ.ಎಸ್.ಐ. ಆಸ್ಪತ್ರೆಯ ಪ್ರಯೋಜನ ಪಡೆಯಿರಿ: ಸಂಸದ ರಾಘವೇಂದ್ರ

Next Post

ಕೊರೋನಾ ಸೋಂಕು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಧೀಶರಿಂದ ಮನವಿ

kalpa News

kalpa News

Next Post
ಕೊರೋನಾ ಸೋಂಕು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಧೀಶರಿಂದ ಮನವಿ

ಕೊರೋನಾ ಸೋಂಕು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಧೀಶರಿಂದ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL