ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾಡಿ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ. ಹೀಗಾಗಿ ಸಮಾವೇಶದ ಬಳಿಕ ಜಯಮೃತ್ಯುಂಜ ಸ್ವಾಮೀಜಿ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮಾರ್ಚ್ 4ರಿಂದ ಧರಣಿ ನಡೆಸಲು ಪಂಚಮಸಾಲಿ ಸ್ವಾಮೀಜಿಗಳು ತೀರ್ಮಾನಿಸಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ 2ಎ ಮೀಸಲಾತಿ ಪ್ರಕಟಿಸಬೇಕೆಂದು ಪಟ್ಟು ಹಿಡಿದಿದ್ದ ಪಂಚಮಸಾಲಿ ಸಮುದಾಯ ಹಾಗೂ ಸ್ವಾಮೀಜಿ ಮಾತಿಗೆ ಸರ್ಕಾರ ಒಪ್ಪಿಗೆ ನೀಡಿಲ್ಲ. ಹೀಗಾಗಿ ಸಮುದಾಯದ ಜನರ ಒತ್ತಾಯದ ಮೇರೆಗೆ ಸಮಾವೇಶದಲ್ಲಿ ಭಾಗವಹಿಸಿದ್ದ ಸಾವಿರಾರು ಪಂಚಮಸಾಲಿ ಜನರೊಂದಿಗೆ ವಿಧಾನ ಸೌಧದತ್ತ ಪಾದಯಾತ್ರೆ ಮುಂದುವರೆಸಲು ನಿರ್ಧರಿಸಿದ್ದರು. ಮೊದಲಿಗೆ ವಿಧಾನ ಸೌಧ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸ್ ಆಯುಕ್ತ ಕಮಲ್ ಪಂತ್ ಮನವೊಲಿಕೆ ಹಿನ್ನಲೆಯಲ್ಲಿ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಲು ತೀರ್ಮಾನಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post