ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ಎ2 ನಟ ದರ್ಶನ್ #Actor Darshan ಸೇರಿದಂತೆ ಆರು ಮಂದಿಯನ್ನು ಮತ್ತೆ ಪೊಲೀಸ್ ಕಸ್ಟಡಿಗೆ ವಹಿಸಲಾಗಿದ್ದು, ಎ1 ಪವಿತ್ರಾ ಸೇರಿ ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

Also read: ಕೊಡಗು ಏಕಾಏಕಿ ಕುಸಿದ ಕಟ್ಟಡ | ಹಲವರು ಸಿಲುಕಿರುವ ಶಂಕೆ | ರಕ್ಷಣಾ ಕಾರ್ಯಾಚರಣೆ
ಈ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಆರು ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ವಹಿಸಲಾಗಿದ್ದು, ಪವಿತ್ರಾ ಗೌಡ ಸೇರಿ ಇತರರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಸೇರಿ ಉಳಿದ ಆರೋಪಿಗಳನ್ನು ಇಂದೇ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುವ ಸಾಧ್ಯತೆಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post