ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪತ್ರಕರ್ತ ವಾಗೀಶ್ ಕುಮಾರ್ ಅವರಿಗೆ ಇಂದು ಪ್ರೆಸ್ ಕ್ಲಬ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಭೆಯಲ್ಲಿ ಪಾಲ್ಗೊಂಡ ಕರ್ವಾಟಕ ಮಾಧ್ಯಮ ಅಕಾಡೆಮಿ ಹಾಗೂಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ ಮಾತನಾಡಿ, ಮೃತರ ಆತ್ಮಕ್ಕೆ ಶಾಂತಿಕೋರಿದರು. ಹಾಗೂ ಮೃತ ಪತ್ರಕರ್ತರ ಕುಟುಂಬಕ್ಕೆ ಸರ್ಕಾರದಿಂದ ಸಿಗಬಹುದಾದ ಸಹಾಯವನ್ನು ಒದಗಿಸಿಕೊಡಲು ಯತ್ನಿಸುವುದಾಗಿ ಅವರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಬಿ.ವಿ. ಶಿವಶಂಕರ್, ಪತ್ತಕರ್ತರ ಸಮೂಹ ಸಂಘಟಿತವಾಗಿ ಎಚ್ಚೆತ್ತುಕೊಂಡಿದ್ದಲ್ಲಿ ಇಂಥ ದುರಂತಗಳನ್ನು ತಪ್ಪಿಸಬಹುದಿತ್ತು ಎಂದು ಅಭಿಪ್ರಾಯಪಟ್ಟರು.
ಈಟಿವಿ ಪತ್ರಕರ್ತರ ಬಳಗ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ವಿವಿಧ ಮಾಧ್ಯಮಗಳ ಪತ್ರಕರ್ತ ಮಿತ್ರರು ಪಾಲ್ಗೊಂಡು ವಾಗೀಶ್ ಅವರ ಜತೆಗಿನ ಒಡನಾಟವನ್ನು ನೆನಪಿಸಿಕೊಂಡು ಅವರ ಆತ್ಮಕ್ಕೆ ಶಾಂತಿಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post