No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಚಾಮರಾಜಪೇಟೆಯ ಅವಿಚ್ಛಿನ್ನ ಪರಂಪರಾ ಕೂಡ್ಲಿ ಶೃಂಗೇರಿ ಮಠಕ್ಕೆ ಪೀಠಾಧಿಪತಿ ನೇಮಕ

ವೇದವಿದ್ವಾನ್ ಪಂಡಿತ ಜನಾರ್ಧನ ಶಾಸ್ತ್ರಿ ಜೋಶಿ ಶ್ರೀಮಠದ ಮುಂದಿನ ಪೀಠಾಧಿಪತಿ...

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 5, 2021
in ಬೆಂಗಳೂರು ನಗರ
0
ಚಾಮರಾಜಪೇಟೆಯ ಅವಿಚ್ಛಿನ್ನ ಪರಂಪರಾ ಕೂಡ್ಲಿ ಶೃಂಗೇರಿ ಮಠಕ್ಕೆ ಪೀಠಾಧಿಪತಿ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಅದ್ವೈತ ಸಿದ್ಧಾಂತ ಪ್ರತಿಪಾದಕ ಶಂಕರ ಭಗವತ್ಪಾದರ ತತ್ವ ಸಿದ್ಧಾಂತ, ಸಂದೇಶಗಳನ್ನು ಇಡೀ ಮನುಕುಲಕ್ಕೆ ಪ್ರಚುರಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಶತಮಾನಗಳ ಇತಿಹಾಸವುಳ್ಳ ಚಾಮರಾಜಪೇಟೆಯಲ್ಲಿರುವ ಅವಿಚ್ಛಿನ್ನ ಪರಂಪರಾ ಶ್ರೀ ಕೂಡ್ಲಿ-ಶೃಂಗೇರಿ ಮಠಕ್ಕೆ ಬೃಹ್ಮೀಭೂತ ಶ್ರೀ ವಿದ್ಯಾಭಿನವ ಶಂಕರ ಭಾರತಿ ಅವರ ಲಿಖಿತ ಅಧಿಕೃತ ಆದೇಶ ಹಾಗೂ ಅಪೇಕ್ಷೆಯಂತೆ ಭಾರತದಾದ್ಯಂತ ಮನ್ನಣೆ ಪಡೆದಿರುವ ವೇದ, ಉಪನಿಷತ್ತು ಹಾಗೂ ಸಂಸ್ಕøತ ಭಾಷಾ ಬೆಳವಣಿಗೆಗೆ ಅಪಾರ ಸೇವೆ ಸಲ್ಲಿಸಿರುವ ಪಂಡಿತ ಪ್ರಕಾಂಡ ಬ್ರಹ್ಮಶ್ರೀ ಭಾಲಚಂದ್ರ ಶಾಸ್ತ್ರಿಗಳ ಪೌತ್ರರಾಗಿರುವ ಯುವ ಸಂಸ್ಕøತ ವಿದ್ವಾಂಸ ಹಾಗೂ ವೇದವಿದ್ವಾನ್ ಪಂಡಿತ ಜನಾರ್ಧನ ಶಾಸ್ತ್ರಿ ಜೋಶಿಯವರನ್ನು ಶ್ರೀಮಠದ ಮುಂದಿನ ಪೀಠಾಧಿಪತಿಗಳನ್ನಾಗಿ ಇಂದು ನಡೆದ ಶ್ರೀಮಠದ ಭಕ್ತರ ಹಾಗೂ ಆಡಳಿತ ಮಂಡಳಿಯ ಸಭೆಯಲ್ಲಿ ಸರ್ವಾನುಮತದಿಂದ ನೇಮಕ ಮಾಡಲಾಗಿದೆ.

ಶ್ರೀಮಠದ ಪ್ರಾಂಗಣದಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ಮಠದ ಹಲವಾರು ಭಕ್ತರ ಹಾಗೂ ಆಡಳಿತ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇಂದಿನಿಂದಲೇ ಶ್ರೀಮಠದ ಎಲ್ಲ ವ್ಯವಹಾರ ನಿರ್ವಹಣೆ ಹಾಗೂ ಶ್ರೀಮಠದ ಧಾರ್ಮಿಕ ಕೈಂಕರ್ಯಗಳನ್ನು ಕೈಗೊಳ್ಳುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.
ಮಹಾನಗರ ಪಾಲಿಕೆಯ ಅಧಿಕೃತ ಅನುಮತಿಯೊಂದಿಗೆ ಕೋವಿಡ್‍ನ ಎಲ್ಲ ನಿಯಮಾವಳಿಗಳನ್ನು ಪರಿಪಾಲಿಸಿ ನಡೆಸಲಾದ ಸಭೆ, ವೇದ, ಘೋಷಗಳೊಂದಿಗೆ ಆರಂಭವಾಯಿತು. ಆಡಳಿತ ಮಂಡಳಿಯ ಅಧ್ಯಕ್ಷ ರವಿ ದೇಶಪಾಂಡೆ, ಪೂಜ್ಯ ಶ್ರೀಗಳ ಬ್ರಹ್ಮೈಕ್ಯದ ನಂತರ ನಡೆದ ಎಲ್ಲ ವಿದ್ಯಮಾನಗಳನ್ನು ಸಭೆಯ ಮುಂದಿಟ್ಟರು. ಅಲ್ಲದೇ ನೂತನ ಪೀಠಾಧಿಪತಿಗಳ ನೇಮಕ ಕುರಿತಂತೆ ಪ್ರಸ್ತಾವನೆ ಮಂಡಿಸಿದರು.

ಈ ಸಂದರ್ಭದಲ್ಲಿ ಹಿಂದಿನ ಶ್ರೀಗಳು ಒಂದು ವರ್ಷದ ಹಿಂದೆಯೇ ಮುಂದಿನ ಪೀಠಾಧಿಪತಿ ನೇಮಕ ಕುರಿತು ಸಿದ್ಧಪಡಿಸಿದ್ದ ಅಧಿಕೃತ ಪತ್ರ ಹಾಗೂ ನಿಯೋಜಿತ ಪೀಠಾಧಿಪತಿಯವರ ತಂದೆ ತಾಯಿಗೆ ಶ್ರೀಗಳೇ ಖುದ್ದಾಗಿ ಬರೆದ ಪತ್ರವನ್ನು ಸಭೆಯ ಮುಂದಿಟ್ಟರು. ಶ್ರೀಕ್ಷೇತ್ರ ಹೆಬ್ಬಳ್ಳಿಯ ಚೈತನ್ಯಾಶ್ರಮದ ಪರಮ ಪೂಜ್ಯ ದತ್ತಾವಧೂತ ಮಹಾರಾಜರೊಂದಿಗೆ ಪೂಜ್ಯ ಸ್ವಾಮಿಗಳು, ವಿದ್ವಾನ್ ಜನಾರ್ಧನ ಶಾಸ್ತ್ರಿ ಜೋಶಿಯವರೇ ಮುಂದಿನ ಪೀಠಾಧಿಪತಿ ಎಂದು ಘೋಷಿಸಿದ್ದ ದೂರವಾಣಿ ಸಂಭಾಷಣೆಯನ್ನು ಸಭೆಯಲ್ಲಿ ಪ್ರಸಾರ ಮಾಡಲಾಯಿತು.
ಪೀಠಾಧಿಪತಿ ನೇಮಕ ಕುರಿತಂತೆ ನರೇಗಲ್ಲದ ಭಕ್ತರಾದ ಸಂಜೀವ ಕುಲಕರ್ಣಿ ಹಾಗೂ ಕೋಳಿವಾಡದ ಶ್ರೀನಿವಾಸ ಕುಲಕರ್ಣಿ, ಪೂಜ್ಯ ಶ್ರೀಗಳ ಅಪೇಕ್ಷೆಯಂತೆಯೇ ಹಾಗೂ ದಾಖಲೆಯಂತೆ ಜನಾರ್ಧನ ಶಾಸ್ತ್ರಿ ಜೋಶಿಯವರನ್ನೇ ಶ್ರೀಮಠದ ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿ ಬ್ರಹ್ಮೈಕ್ಯ ಶ್ರೀಗಳ ಮಹದಾಸೆ ಈಡೇರಿಸಲು ತಾವು ಸೂಚಿಸುವುದಾಗಿ ಹೇಳಿದರು.

ಬೆಂಗಳೂರಿನ ಅಶ್ವಥನಾರಾಯಣ ಶೆಟ್ಟಿ, ರವೀಂದ್ರ ಡಂಬಳ ಹಾಗೂ ಚಂದ್ರಮೌಳಿ ಸಿಂಧಗಿ ಹಿಂದಿನ ಶ್ರೀಗಳ ಅಪೇಕ್ಷೆಯಂತೆಯೇ ಕೂಡಲೇ ಜನಾರ್ಧನ ಶಾಸ್ತ್ರಿಯವರಿಗೆ ಸಂನ್ಯಾಸ ದೀಕ್ಷೆ ಹಾಗೂ ಪೀಠಾರೋಹಣ ಕಾರ್ಯ ನಡೆಸಬೇಕು ಎಂಬ ಸೂಚಕರ ಹೇಳಿಕೆಯನ್ನು ಅನುಮೋದಿಸಿದರು.

ಅವಿಚ್ಛಿನ್ನ ಪರಂಪರಾ ಕೂಡ್ಲಿ-ಶೃಂಗೇರಿ ಮಠಕ್ಕೆ ವಿದ್ವಾನ್ ಜನಾರ್ಧನ ಶಾಸ್ತ್ರಿ ಜೋಶಿಯವರನ್ನು ಪೀಠಾಧಿಪತಿಗಳನ್ನಾಗಿ ನೇಮಕ ಮಾಡುವುದಕ್ಕೆ ಸಭೆ ಸರ್ವಾನುಮತದ ನಿರ್ಣಯ ಸ್ವೀಕರಿಸಿತು. ಈ ಸಂದರ್ಭದಲ್ಲಿ ಹೆಬ್ಬಳ್ಳಿಯ ಚೈತನ್ಯಾಶ್ರಮದ ಪರಮ ಪೂಜ್ಯ ದತ್ತಾವಧೂತ ಮಹಾರಾಜರು ವ್ಹಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಪಾಲ್ಗೊಂಡು, ಹಿಂದಿನ ಶ್ರೀಗಳ ಅಪೇಕ್ಷೆಯಂತೆ ನೂತನ ಪೀಠಾಧಿಪತಿಗಳನ್ನು ನೇಮಕ ಮಾಡುವ ಶ್ರೀಮಠದ ಭಕ್ತರ ಹಾಗೂ ಆಡಳಿತ ಮಂಡಳಿಯ ಸದಸ್ಯರ ಒಕ್ಕೊರಲ ನಿರ್ಣಯಕ್ಕೆ, ಸಂತಸ ವ್ಯಕ್ತಪಡಿಸಿದರು.

ಇದಕ್ಕೂ ಮೊದಲು ಸಭೆಯಲ್ಲಿ ಶ್ರೀಮಠದ ಅಭಿವೃದ್ಧಿ ಕುರಿತು ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಶ್ರೀಮದ್ ಜಗದ್ಗುರು ಪಾಠಶಾಲೆಯ ಮುಖ್ಯಸ್ಥರಾದ ಪಂಡಿತ ರಾಜೇಶ್ವರ ಶಾಸ್ತ್ರಿ ಜೋಶಿ, ಪಂಡಿತರಾದ ನಾಗೇಶ ಶಾಸ್ತ್ರಿ, ಡಾ. ವೇಣಿ ಮಾಧವ ಶಾಸ್ತ್ರಿ, ನಾರಾಯಣ ಜೋಯಿಸ್, ಶ್ರೀಧರ ಇನಾಮದಾರ, ಶ್ರೀಮಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಮಹೇಶ ವಾಳ್ವೇಕರ, ಕಾರ್ಯದರ್ಶಿ ಅಶ್ವಥ ನಾರಾಯಣ ಕುಮಾರ, ನಿನಾದ ಕಾಶಿಕರ, ನವನೀತ ಜೋಶಿ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಶ್ರೀ ಪ್ರಕಾಶ ನಾಡಿಗೇರ, ಹಾಗೂ ರಮಾದೇವಿ ಜೋಶಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಶ್ರೀಮಠದ ಭಕ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಅಶ್ವಥನಾರಾಯಣ ಕುಮಾರ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBBMPChamarajapete Koodli Shringere MuttKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಚಾಮರಾಜಪೇಟೆ ಕೂಡ್ಲಿ ಶೃಂಗೇರಿ ಮಠಬೆಂಗಳೂರುಬೆಂಗಳೂರು ಮಹಾನಗರ ಪಾಲಿಕೆ
Share223Tweet123Send
Previous Post

ಶಾಲಾ ದಾಖಲಾತಿಗೆ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಾತಿ ಮಾಡದಿರಿ: ಡಿಡಿಪಿಐ

Next Post

ಬೇರೆ-ಬೇರೆ ಮನೆಯ ಮದುವೆ ಸಂಬಂಧ: ಮಂಡ್ಯದಲ್ಲಿ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಬೇರೆ-ಬೇರೆ ಮನೆಯ ಮದುವೆ ಸಂಬಂಧ: ಮಂಡ್ಯದಲ್ಲಿ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL