ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಪ್ರಾಪ್ತರನ್ನು ಶಿರೂರು ಮಠಕ್ಕೆ ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಆದೇಶಿಸಿದೆ.
ಲಾತವ್ಯ ಆಚಾರ್ಯ ಹಾಗೂ ಇತರರು ಈ ವಿಚಾರವಾಗಿ ಸಲ್ಲಿಸಿದ್ದಂತಹ ಅರ್ಜಿಯ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಇಂದು ಪ್ರಕಟಿಸಿದರು.
ಪೀಠಾಧಿಪತಿಗಳನ್ನು ನೇಮಿಸುವ ವಿಚಾರದಲ್ಲಿ 800 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಮಠದ ಸಂಪ್ರದಾಯದಲ್ಲಿ ನ್ಯಾಯಾಲಯವು ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post