ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪಿಎಫ್‌ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳವರೆಗೆ ಯುಎಪಿಎ ಕಾಯಿದೆ ಅಡಿಯಲ್ಲಿ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿದೆ. ದೇಶದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್‌ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post