ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಧಾನಮಂತ್ರಿ ನರೇಂದ್ರ ಮೋದಿಯವರು PM Narendra Modi ಇಂದು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಮಿದುಳು ಸಂಶೋಧನಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು ಹಾಗೂ 425 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಅನಾವರಣಗೊಳಿಸಿ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ನೆರವೇರಿಸಿದರು. ತಂತ್ರಜ್ಞಾನ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಿದ 150 ಐಟಿಐಗಳನ್ನು ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, Thavar Chand Gehlot ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, CM Basavaraja Bommai ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ವಸತಿ ಸಚಿವ ವಿ. ಸೋಮಣ್ಣ, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಸಾರಿಗೆ ಸಚಿವ ಶ್ರೀರಾಮುಲು, ಇಂಧನ ಸಚಿವ ವಿ. ಸುನಿಲ್ ಕುಮಾರ್ ಉಪಸ್ಥಿತರಿದ್ದರು.
Also read: ಪ್ರಧಾನಿ ಮೋದಿಯವರಿಗೆ ಆತ್ಮೀಯ ಸ್ವಾಗತ ಕೋರಿದ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post