ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ಅವರ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣವನ್ನು POCSO Case ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಈ ಕುರಿತಂತೆ ಡಿಜಿಐಜಿಪಿ ಅಲೋಕ್ ಕುಮಾರ್ DGIGP Alok Kumar ಅವರು ಆದೇಶಿಸಿದ್ದಾರೆ ಎಂದು ಹೇಳಲಾಗಿದ್ದು, ಇದು ಹೈಪ್ರೊಫೈಲ್ ಪ್ರಕರಣವಾದ ಕಾರಣ ದೂರು ನೀಡಿರುವ ಮಹಿಳೆಯ ಕುರಿತಾಗಿಯೂ ಸಹ ತನಿಖೆಯಾಗಬೇಕಿದೆ. ಹೀಗಾಗಿ, ಪ್ರಕರಣವನ್ನು ಸಿಐಡಿಗೆ CID ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.
Also read: ನಾಳೆ ಮಧ್ಯಾಹ್ನ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ | ನಾಳೆಯಿಂದಲೇ ನೀತಿ ಸಂಹಿತೆ?
ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಮಹಿಳೆ ಈಗಾಗಲೇ ಹಲವು ಅಧಿಕಾರಿ ಹಾಗೂ ಗಣ್ಯರ ವಿರುದ್ಧ ದೂರಿದ್ದಾರೆ. ಅಲ್ಲದೇ, ಮಹಿಳೆಯ ವಿರುದ್ಧವೇ ಹಲವು ಪ್ರಕರಣಗಳು ದಾಖಲಾಗಿವೆ ಎಂದೂ ಸಹ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತಾಗಿ ಕೂಲಂಕಶವಾಗಿ ತನಿಖೆ ನಡೆಯಬೇಕಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚನೆಯಾಗಬೇಕು. ಹೀಗಾಗಿ, ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post