ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪೋಕ್ಸೋ ಪ್ರಕರಣಕ್ಕೆ #POCSO Case ಸಂಬಂಧಪಟ್ಟಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ #B S Yadiyurappa ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಮಾರ್ಚ್ 15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ.
ಬಿ.ಎಸ್. ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯವು ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ.
ಬಾಲಕಿ, ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಿದ್ದಾರೆ. ತಾಯಿಯ ಮೊಬೈಲ್ನಲ್ಲಿದ್ದ ಸಂಭಾಷಣೆ ಬಿಎಸ್ ಯಡಿಯೂರಪ್ಪ ಅಳಿಸಿಲ್ಲ. ಪೊಲೀಸರು ಹಾಕಿರುವ ಐಟಿ ಸೆಕ್ಷನ್ ದೂರುದಾರರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದರು.
Also read: ಶಿವಮೊಗ್ಗ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಅಪ್ಡೇಟ್ | ಇದನ್ನು ಗಮನಿಸಿ ಜರ್ನಿ ಪ್ಲಾನ್ ಮಾಡಿ
1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು. ಈಗ ವಿಶೇಷ ಕೋರ್ಟ್ ಕಾಗ್ನಿಜೆನ್ಸ್ ಪಡೆದು ಸಮನ್ಸ್ ಜಾರಿಗೊಳಿಸಿದೆ ಎಂದು ಬಿಎಸ್ ಯಡಿಯೂರಪ್ಪ ಪರ ವಕೀಲರು ವಾದಿಸಿದರು.
ಬಿಎಸ್ ಯಡಿಯೂರಪ್ಪ ವಕೀಲರ ಮನವಿಗೆ ಅಡ್ವೊಕೇಟ್ ಜನರಲ್ ಆಕ್ಷೇಪಿಸಿದರು. ಹೈಕೋರ್ಟ್ ಸೂಚನೆಯಂತೆ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಹೀಗಾಗಿ ಸಮನ್ಸ್ಗೆ ತಡೆ ನೀಡದಂತೆ ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post