ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಯಾವ ಭಯೋತ್ಪಾದಕ #Terrorism ಕೃತ್ಯಗಳಿಗೂ ಕಡಿಮೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ‘ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ #Pesticide to Drinking Water Tank ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ.
ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ’ ಎಂದಿದ್ದಾರೆ.
ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ’ ಎಂದಿದ್ದಾರೆ.
‘ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















