No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜಕೀಯ ಪ್ರಾತಿನಿಧ್ಯ ಹಾಗೂ ನೇಕಾರರ ಸಮುದಾಯಗಳ ಅಭಿವೃದ್ದಿ ನಿಗಮಕ್ಕೆ ನೇಕಾರ ಸಮುದಾಯದ ಸ್ವಾಮೀಜಿಗಳ ಒತ್ತಾಯ

kalpa News by kalpa News
February 16, 2023
in ಬೆಂಗಳೂರು ನಗರ
0
ರಾಜಕೀಯ ಪ್ರಾತಿನಿಧ್ಯ ಹಾಗೂ ನೇಕಾರರ ಸಮುದಾಯಗಳ ಅಭಿವೃದ್ದಿ ನಿಗಮಕ್ಕೆ ನೇಕಾರ ಸಮುದಾಯದ ಸ್ವಾಮೀಜಿಗಳ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ಸುಮಾರು 60 ಲಕ್ಷದಷ್ಟು ಜನಸಂಖ್ಯೆಯನ್ನು ಹೊಂದಿರುವ ನೇಕಾರ ಸಮುದಾಯಗಳಿಗೆ ರಾಜಕೀಯ ಪಕ್ಷಗಳು ಕನಿಷ್ಠ 5 ಕ್ಷೇತ್ರಗಳಲ್ಲಿ ಟಿಕೆಟ್ ಕೊಟ್ಟು ಸಮಾಜದ ರಾಜಕೀಯ ಬಲಾಡ್ಯತೆಗೆ ಮುಂದಾಗಬೇಕು. ಅಲ್ಲದೇ, ಮುಂದಿನ ಆಯವ್ಯದಲ್ಲಿ ಸರ್ಕಾರ ನೇಕಾರ ಸಮುದಾಯಗಳ ಅಭಿವೃದ್ದಿಗೆ ʼನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ’ ವನ್ನು ಪ್ರಾರಂಭಿಸಬೇಕು ಎಂದು ನೇಕಾರರ ಸಮುದಾಯಗಳ ಮಠಾಧೀಶರುಗಳು ಇಂದು ಒಕ್ಕೊರಲಿನಿಂದ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಹಂಪೆಯ ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದ ಶ್ರೀ ದಯಾನಂದ ಪುರಿ ಸ್ವಾಮೀಜಿ, ಗುಳೇದಗುಡ್ಡ ಶ್ರೀ ಗುರುಬಸವ ಕೇಂದ್ರದ 1008 ಜಗದ್ಗುರು ಶ್ರೀ ಬಸವರಾಜ ಪಟ್ಟದಾರ್ಯ ಸ್ವಾಮೀಜಿ, ದೊಡ್ಡಬಳ್ಳಾಪುರದ ಶ್ರೀ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ, ಹರಿಹರದ ಶ್ರೀ ಪ್ರಭುಲಿಂಗ ಸ್ವಾಮೀಜಿ, ಹಳೇ ಹುಬ್ಬಳಿಯ ಶ್ರೀ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ, ಬಾಗಲಕೋಟೆಯ ಶ್ರೀ ಘನಲಿಂಗ ಮಹಾಸ್ವಾಮಿಗಳು ಮತ್ತು ಯಾದಗಿರಿಯ ಡಾ. ಈಶ್ವರಾನಂದ ಸ್ವಾಮೀಜಿಗಳು ಒಕ್ಕೊರಲಿನಿಂದ ರಾಜಕೀಯ ಪಕ್ಷಗಳನ್ನು ಹಾಗೂ ರಾಜ್ಯ ಸರಕಾರವನ್ನು ಆಗ್ರಹಿಸಿದರು.
ಹಂಪೆಯ ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದ ಶ್ರೀ ದಯಾನಂದ ಪುರಿ ಸ್ವಾಮೀಜಿ ಮಾತನಾಡಿ, ನೇಕಾರಿಕೆಯನ್ನು ಕುಲವೃತ್ತಿಯನ್ನಾಗಿ ಅಳವಡಿಸಿಕೊಂಡಿರುವ ರಾಜ್ಯದ ನೇಕಾರರು ಹಿಂದುಳಿದ ವರ್ಗಗಳ ಗುಂಪಿಗೆ ಸೇರಿದವರಾಗಿದ್ದಾರೆ. ರಾಜ್ಯದಲ್ಲಿ 29 ಒಳಪಂಗಡಗಳ ಹೆಸರಿನಲ್ಲಿ ಗುರುತಿಸಿಕೊಂಡಿರುವ ನೇಕಾರ ಸಮುದಾಯವು ಸುಮಾರು 60 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ನೇಕಾರಿಕೆಯನ್ನು ಅವಲಂಬಿಸಿಕೊಂಡಿರುವ ನೇಕಾರರು ಇಂದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಸಮುದಾಯ ಮತ್ತು ಸಮುದಾಯ ಅವಲಂಬಿಸಿರುವ ನೇಕಾರಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ರಾಜ್ಯ ಸರಕಾರಕ್ಕೆ ಒಕ್ಕೊರಲಿನ ಒತ್ತಾಯವನ್ನು ಮಾಡುತ್ತಿದ್ದೇವೆ ಎಂದರು.

Also read: ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

ಗುಳೇದಗುಡ್ಡ ಶ್ರೀ ಗುರುಬಸವ ಕೇಂದ್ರದ 1008 ಜಗದ್ಗುರು ಶ್ರೀ ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಮಾತನಾಡಿ, ನೇಕಾರರು ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರವು ಆದ್ಯ ಗಮನಹರಿಸಬೇಕು. ನೇಕಾರ ಪರವಾದ ಸಂಘಟನೆಗಳು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಸಿದ ಹೋರಾಟದ ಫಲವಾಗಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ರವರು ಇತ್ತೀಚೆಗೆ ನೇಕಾರ ಸಮ್ಮಾನ್”, ಯೋಜನೆಯ ಮೊತ್ತವನ್ನು 5,000/- ರೂ.ಗಳವರೆಗೆ ಹೆಚ್ಚಳ, ಎರಡು ಲಕ್ಷದವರೆಗೆ ಶೂನ್ಯ ಬಡ್ಡಿರಹಿತ ಸಾಲದ ಯೋಜನೆಗಳನ್ನು ಪ್ರಕಟಿಸಿದ್ದಕ್ಕಾಗಿ ಸಮಸ್ತ ನೇಕಾರ ಸಮುದಾಯಗಳ ಪರವಾಗಿ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.
ದೊಡ್ಡಬಳ್ಳಾಪುರದ ಶ್ರೀ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ ಮಾತನಾಡಿ, ರಾಜ್ಯದ ಪ್ರತಿಯೊಂದು ಚುನಾವಣೆಯಲ್ಲೂ ನೇಕಾರರು ಪ್ರಮುಖ ಪಾತ್ರವನ್ನು ವಹಿಸುತ್ತಾ ಬಂದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಸಮುದಾಯವು ಶೈಕ್ಷಣಿಕವಾಗಿ ಈಗೀಗ ಒಂದಿಷ್ಟು ಸುಧಾರಣೆಯನ್ನು ಕಾಣುತ್ತಿರುವುದು ನೆಮ್ಮದಿಯ ಸಂಗತಿಯಾದರೂ, ಯಾವುದೇ ಸಮುದಾಯ ಬಲಿಷ್ಠಗೊಳ್ಳಲು ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯವಾಗಿರುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೇಕಾರ ಸಮುದಾಯ ಪ್ರಾತಿನಿಧ್ಯವನ್ನು ಕಂಡುಕೊಳ್ಳುವ ಮೂಲಕ ರಾಜಕೀಯ ಅಸ್ತಿತ್ವವನ್ನು ಹೊಂದಬಹುದಾಗಿದೆ. ಆದಕಾರಣ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನೇಕಾರ ಸಮುದಾಯಗಳಿಗೆ ಕನಿಷ್ಠ 5 ಕ್ಷೇತ್ರಗಳಲ್ಲಿ ಟಿಕೆಟ್ ಕೊಟ್ಟು ಸಮಾಜದ ರಾಜಕೀಯ ಬಲಾಡ್ಯತೆಗೆ ಮುಂದಾಗಬೇಕೆಂಬುದು ನೇಕಾರ ಮಠಾಧೀಶರುಗಳ ಒತ್ತಾಯವಾಗಿದೆ ಎಂದು ಹೇಳಿದರು.

ಹರಿಹರದ ಶ್ರೀ ಪ್ರಭುಲಿಂಗ ಸ್ವಾಮೀಜಿ ಮಾತನಾಡಿ, ಇದರ ಜೊತೆಗೆ ಸುಧೀರ್ಘ ಕಾಲದಿಂದ ‘ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ’ ವನ್ನು ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಹಲವಾರು ಬಾರಿ ಸರ್ಕಾರದ ಮುಂದೆ ಇಟ್ಟಿದ್ದೇವೆ. ನಮ್ಮ ಸಮುದಾಯದ ಯುವಕರು ನೇಕಾರಿಕೆಯನ್ನು ಕೈಬಿಟ್ಟು ಇತರೆ ಉದ್ಯೋಗಗಳನ್ನು ಅವಲಂಬಿಸುತ್ತಿದ್ದಾರೆ. ಪರಿಸ್ಥಿತಿಯಲ್ಲಿ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದರೆ ನೇಕಾರಿಕೆಯಿಂದ ದೂರ ಉಳಿಯುತ್ತಿರುವ ಜಾತಿ ಆಧಾರಿತ ನೇಕಾರರನ್ನು ಪುನಃ ನೇಕಾರಿಕೆಗೆ ಕರೆತರಲು ಸಾಧ್ಯವಾಗಲಿದೆ. ಆದಕಾರಣ ʼನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ’ ತುರ್ತು ಅಗತ್ಯವಿದೆ. ಸಧ್ಯದಲ್ಲೇ ಮಂಡಿಸಲಿರುವ ‘ಆಯವ್ಯಯ’ದಲ್ಲಿ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ರಚನೆಯನ್ನು ಘೋಷಿಸಿ ಅದರ ಕಾರ್ಯನಿರ್ವಹಣೆಗೆ 500 ಕೋಟಿ ರೂ.ಗಳ ಅನುದಾನವನ್ನು ಮೀಸಲಿರಿಸಬೇಕೆಂದು ಮಠಾಧೀಶರುಗಳು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.

ಹಳೇ ಹುಬ್ಬಳಿಯ ಶ್ರೀ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ, ಬಾಗಲಕೋಟೆಯ ಶ್ರೀ ಘನಲಿಂಗ ಮಹಾಸ್ವಾಮಿಗಳು ಮತ್ತು ಯಾದಗಿರಿಯ ಡಾ. ಈಶ್ವರಾನಂದ ಸ್ವಾಮೀಜಿಗಳು ಹಾಗೂ ನೇಕಾರರ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

Next Post

ಫೆ.18ರಂದು ಶಿವರಾತ್ರಿ ವೈಭವ: ವಿಶೇಷ ಜನಜಾಗೃತಿ ಕಾರ್ಯಕ್ರಮ

kalpa News

kalpa News

Next Post
ಫೆ.18ರಂದು ಶಿವರಾತ್ರಿ ವೈಭವ: ವಿಶೇಷ ಜನಜಾಗೃತಿ ಕಾರ್ಯಕ್ರಮ

ಫೆ.18ರಂದು ಶಿವರಾತ್ರಿ ವೈಭವ: ವಿಶೇಷ ಜನಜಾಗೃತಿ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL