ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಳೆದ ಕೆಲವು ದಿನಗಳಿಂದ ರಾಜರಾಜೇಶ್ವರಿ ನಗರದ RR Nagar ಕಮಾನು ಮುಂಭಾಗದಲ್ಲಿ ಪಾದಚಾರಿಗಳಿಗೆ ಸಂಚರಿಸಲು ಮಾರ್ಗವಿಲ್ಲದೆ ಪರಾದಾಡುವಂತಾಗಿದೆ.
ರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣದಿಂದ Metro Rail ಕೊಗಳತೆ ದೂರದಲ್ಲಿ ಇರುವ ಪಾದಚಾರಿ ಮಾರ್ಗದ ಮೇಲೆ ಒಂದು ದೊಡ್ಡ ಕಂಬ ಬಿದಿದೆ. ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಇರುವುದರಿಂದ ಕೆಲಸಕ್ಕೆ ಹೋಗುವವರು, ಶಾಲಾ – ಕಾಲೇಜುಗಳಿಗೆ ಕಾಲ್ನಡಿಗೆಯಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ಪಾದಾಚಾರಿ ಮಾರ್ಗವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.
ಸ್ಥಳೀಯರ ಆಕ್ರೋಶ:
ಪಾದಚಾರಿ ಮಾರ್ಗ ವಿಲ್ಲದೆ ಓಡಾಡಲು ಕಷ್ಟಪಡುತ್ತಿದ್ದೂ, ಇದಕ್ಕೆ ಸಂಬಂಧವೊಲ್ಲದೆ ಬಿಬಿಎಂಪಿ ಹಾಗೂ ಇಲಾಖಾ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪಾದಚಾರಿ ಮಾರ್ಗವಿದ್ದರೂ ರಸ್ತೆಯ ಮಧ್ಯದಲ್ಲಿ ಸಾಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚಿನ ವಾಹನ ದಟ್ಟಣೆಯಿಂದ ಅಪಘಾತ ಸಂಭವಿಸುವುದಕ್ಕೂ ಮುನ್ನ ಸಂಬಂಧಪಟ್ಟವರು ಎಚ್ಚೆತ್ತು, ಪಾದಚಾರಿ ಮಾರ್ಗದಲ್ಲಿ ಬಿದ್ದಿರುವ ಕಂಬವನ್ನು ತೆರವುಗೊಳಿಸಲಿ ಎಂಬುದು ಸಾರ್ವಜನಿಕರ ಆಶಯ.
ಚಿತ್ರ, ವರದಿ: ತೀರ್ಥಹಳ್ಳಿ ಅನಂತ ಕಲ್ಲಾಪುರ, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post