ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ನ.29ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ. ಈ ಪರಿಣಾಮವಾಗಿ ನ.೨೯ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















