ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಚಾಮರಾಜಪೇಟೆ ಶಾಸಕ ಬಿ.ಝಡ್. ಜಮೀರ್ ಅಹಮದ್ ವಿರುದ್ಧ ಫೇಸ್’ಬುಕ್’ನಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ಎಫ್’ಐಆರ್ ದಾಖಲಾಗಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಮನೋಜ್ ಗೌಡ ಎನ್ನುವವರು ಫೇಸ್’ಬುಕ್’ನಲ್ಲಿ ಜಮೀರ್ ವಿರುದ್ಧ ಕೆಲವು ತಿಂಗಳ ಹಿಂದೆ ಪೋಸ್ಟ್ ಹಾಕಿದ್ದರು ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಶಾಸಕರ ಸಹಾಯಕರೊಬ್ಬರು ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರಿಗೆ ದೂರು ದಾಖಲಿಸಿದ್ದರು.
ಇದನ್ನು, ಚಾಮರಾಜಪೇಟೆ ಠಾಣೆಗೆ ಆಯುಕ್ತರು ರವಾನಿಸಿದ್ದು, ಇದರಂತೆ ಎನ್’ಸಿಆರ್ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post