ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯು ಫೆ.27ರಂದು 64ನೇ ವಾರ್ಷಿಕ ಸರ್ವ ಸದಸ್ಯರ ಸಭೆಯ ತಿಳುವಳಿಕೆ ಪತ್ರ ಮತ್ತು 2021-22ನೇ ಸಾಲಿಗೆ ಚುನಾವಣಾ ವೇಳಾಪಟ್ಟಿಯನ್ನು ಸದಸ್ಯರುಗಳ ಗಮನಕ್ಕೆ ವಾಟ್ಸಾಪ್ ಮೂಲಕ ಕಳುಹಿಸಲಾಗಿತ್ತು. ಈ ಸಂಬಂಧವಾಗಿ ಮಾರ್ಚ್ 2ರಂದು ನಡೆದ ತುರ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಗಾಗಲೇ ಘೋಷಿಸಿರುವ ಸರ್ವ ಸದಸ್ಯರ ಸಭೆ ಮತ್ತು ಚುನಾವಣೆಯನ್ನು ಮುಂದೂಡಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸರ್ವ ಸದಸ್ಯರ ಸಭೆ ಮತ್ತು ಚುನಾವಣಾ ವೇಳಾಪಟ್ಟಿಯನ್ನು ಸದಸ್ಯರುಗಳ ಗಮನಕ್ಕೆ ತರಲಾಗುವುದು. ಸದಸ್ಯರುಗಳು ಸಹಕರಿಸಬೇಕು ಎಂದು ಗೌರವ ಕಾರ್ಯದರ್ಶಿಗಳಾದ ಎನ್.ಎಂ. ಸುರೇಶ್, ಎ. ಗಣೇಶ್, ಎಂ. ನರಸಿಂಹಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post