ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದು ಮುಂಜಾನೆ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿತ್ರರಂಗ ಹಾಗೂ ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ತೀವ್ರ ಆತಂಕ ಮನೆ ಮಾಡಿದೆ.
ಪುನೀತ್ ಅವರನ್ನು ದಾಖಲಿಸಲಾಗಿರುವ ವಿಕ್ರಂ ಆಸ್ಪತ್ರೆಗೆ ುುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸಚಿವ ಬಿ.ಸಿ. ಪಾಟೀಲ್ ಸೇರಿದಂತೆ ಸಚಿವರುಗಳೂ, ಖ್ಯಾತ ನಟರಾದ ರವಿಚಂದ್ರನ್, ಯಶ್, ನಿರ್ಮಾಪಕ ರಾಕ್’ಲೈನ್ ವೆಂಕಟೇಶ್ ಸೇರಿದಂತೆ ಚಿತ್ರರಂಗದ ಗಣ್ಯಾತಿಗಣ್ಯರು ಭೇಟಿ ನೀಡುತ್ತಿದ್ದಾರೆ.
ಇನ್ನು, ಆಸ್ಪತ್ರೆ ಹಾಗೂ ಪುನೀತ್ ನಿವಾಸದ ಸುತ್ತಲೂ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಲ್ಲದೇ, ಆಸ್ಪತ್ರೆ ಬಳಿ ಬರಲು ಬೆಂಗಳೂರಿನ ಎಲ್ಲ ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post