ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ #Sexual assault case ಸಂಬಂಧಿಸಿದಂತೆ ಮಾಜಿ ಶಾಸಕ, ಬಿಜೆಪಿ ಮುಖಂಡ ಪ್ರೀತಂ ಗೌಡ ಅವರಿಗೆ ಎಸ್’ಐಟಿ ಅಧಿಕಾರಿಗಳು ನೋಟೀಸ್ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ ವರದಿಯಾಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪೆನ್ ಡ್ರೈವ್ ಖರೀದಿ ಮಾಡಿಸಿದ್ದು, ಪ್ರೀತಂ ಗೌಡ #Preetham Gowda ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಕರೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
Also read: ಕಾಂಗ್ರೆಸ್’ಗೆ ತೀವ್ರ ಮುಖಭಂಗ | 18ನೇ ಲೋಕಸಭಾಧ್ಯಕ್ಷರಾಗಿ ಓಂ ಬಿರ್ಲಾ ಮರು ಆಯ್ಕೆ
ಸಂತ್ರಸ್ತೆಯಿಂದ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಎಸಗಿರುವ ವೀಡಿಯೋ ಮಾಡಿ ಶೇರ್ ಮಾಡಿರುವ ಆರೋಪ ಶಾಸಕರ ಮೇಲಿದೆ. ಹೀಗಾಗಿ ಪ್ರಜ್ವಲ್ ಜೊತೆಗೆ ಹಾಸನ ಮಾಜಿ ಶಾಸಕ ಪ್ರೀತಂ ಗೌಡ, ಚೇತನ್ ಹಾಗೂ ಕ್ವಾಲಿಟಿ ಬಾರ್ ಶರತ್ ವಿರುದ್ಧ ಕೂಡ ಕಳೆದ ವಾರ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲಿನ ದೌರ್ಜನ್ಯ), ಐಟಿ ಆಕ್ಟ್ 66ಇ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post