ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೈಂಗಿಕ ದೌರ್ಜನ್ಯದ ಎಸಗಿರುವ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತು ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ನಿನ್ನೆ ರಾತ್ರಿ ಬೆಂಗಳೂರಿಗೆ ಬರಬಹುದು ಎಂಬ ನಿರೀಕ್ಷೆ ಸುಳ್ಳಾಗಿದ್ದು, ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಕಾದುಕಾದು ಸುಸ್ತಾಗಿದ್ದಾರೆ.
ಪ್ರಜ್ವಲ್ ಜರ್ಮನಿಯಲ್ಲಿದ್ದಾರೆ ಎಂದು ಹೇಳಲಾಗಿದ್ದು, ನಿನ್ನೆ ರಾತ್ರಿ ಅಲ್ಲಿಂದ ಹೊರಟು ಬೆಂಗಳೂರಿಗೆ ಬರುತ್ತಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್’ಐಟಿ ಅಧಿಕಾರಿಗಳೂ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿದ್ದರು. ಆದರೆ, ಕೊನೆಗೂ ಅವರು ಕೈಕೊಟ್ಟಿದ್ದು ಇಂದು ಬರುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ.

Also read: ಮಳೆಗಾಲದ ಮುಂಜಾಗ್ರತೆ | ವಿವಿಧೆಡೆ ಡಿಸಿ ದಿವ್ಯಾಪ್ರಭು ಭೇಟಿ, ಪರಿಶೀಲನೆ | ಕ್ಷೀಪ್ರಪಡೆ ರಚಿಸಲು ಸೂಚನೆ
ಇನ್ನು, ಕೊನೆಯ ಕ್ಷಣದಲ್ಲಿ ಟಿಕೆಟ್ ಬುಕ್ ಆಗಿದ್ದರಿಂದ ಪ್ರಜ್ವಲ್ ಬರಬಹುದು ಎಂಬ ನಿರೀಕ್ಷೆ ಎಸ್’ಐಟಿ ಅಧಿಕಾರಿಗಳಲ್ಲಿ ಇತ್ತು. ಆದರೆ, ಜರ್ಮನಿಯ ಕಾಲಮಾನ ಪ್ರಕಾರ 12.20ಕ್ಕೆ ವಿಮಾನ ಟೇಕಾಫ್ ಆಗಿದೆ. ಅತ್ತ ಟೇಕಾಫ್ ಆಗುತ್ತಿದ್ದಂತೆಯೇ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರ ಪಟ್ಟಿ ಬಂದಿದೆ. ಏರ್ ಪೋಟ್’ನಲ್ಲೇ ಇದ್ದ ಎಸ್’ಐಟಿ ಅಧಿಕಾರಿಗಳು, ಪ್ರಯಾಣಿಕರ ಹೆಸರು ಪರಿಶೀಲಿಸಿದ್ದಾರೆ. ಆದರೆ, ವಿಮಾನದಲ್ಲಿರುವ ಪ್ರಯಾಣಿಕರ ಪಟ್ಟಿಯಲ್ಲಿ ಪ್ರಜ್ವಲ್ ಹೆಸರು ಇರಲಿಲ್ಲ. ಬೆಳಗ್ಗೆ ಟಿಕೆಟ್ ಬುಕ್ ಮಾಡಿದ್ದರೂ ಪ್ರಜ್ವಲ್ ಪ್ರಯಾಣ ಮಾಡಿರಲಿಲ್ಲ. ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post