ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರು ಭಾರತಕ್ಕೆ ವಾಪಾಸಾಗುವ ಎರಡು ದಿನ ಮುನ್ನವೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿರುವುದಾಗಿ ವರದಿಯಾಗಿದೆ.
ಪ್ರಜ್ವಲ್ ಪರವಾಗಿ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮೇ 31ಕ್ಕೆ ನ್ಯಾಯಾಲಯ ಮುಂದೂಡಿದೆ.

Also read: ಮುಂದುವರೆದ ರೆಮಲ್ ಚಂಡಮಾರುತದ ಅಬ್ಬರ, 37 ಸಾವು, ಏನೆಲ್ಲಾ ಅವಾಂತರವಾಗಿದೆ?
ಶೀಘ್ರವಾಗಿ ಅರ್ಜಿ ವಿಚಾರಣೆ ನಡೆಸಿ ನಿರೀಕ್ಷಣಾ ಜಾಮೀನು ನೀಡುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಈ ಮನವಿಯನ್ನು ತಿರಸ್ಕರಿಸಿರುವ ನ್ಯಾಯಾಲಯ ಮೇ 31ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post