ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ #State Religious Endowment Department ಪ್ರಮುಖ ದೇವಾಲಯಗಳ ಪ್ರಸಾದವನ್ನು #Temple Prasada ಇನ್ಮುಂದೆ ನೀವು ನಿಮ್ಮ ಮನೆಗೇ ಪಡೆಯಬಹುದು.
ಹೌದು… ರಾಜ್ಯ ಸರ್ಕಾರ ಇಂತಹುದ್ದೊಂದು ಅನುಕೂಲವನ್ನು ಭಕ್ತರಿಗಾಗಿ ಆರಂಭಿಸಿದೆ.
ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ ಎ ಮತ್ತು ಬಿ ದರ್ಜೆಯ 390 ದೇವಾಲಯಗಳಿವೆ. ಭಕ್ತಾದಿಗಳು ಇ-ಪ್ರಸಾದಭಿ ವೆಬ್’ಸೈಟ್ ಮೂಲಕ ಮೊದಲ ಹಂತದಲ್ಲಿ 14 ಪ್ರಮುಖ ದೇವಾಲಯಗಳಿಂದ ಪ್ರಸಾದವನ್ನು ಆನ್ಲೆÊನ್ ಮೂಲಕ ಆರ್ಡರ್ ಮಾಡಿ ಪಡೆಯಲು ಅನುಕೂಲ ಕಲ್ಪಿಸಲಾಗಿದೆ.
ನಾನಾ ಕಾರಣಗಳಿಂದಾಗಿ ಎಲ್ಲರಿಗೂ ದೇವಸ್ಥಾನಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ವಯಸ್ಸಾದವರು, ವಿಶೇಷ ಚೇತನರು, ಒಬ್ಬಂಟಿಗರು ಒಳಗೊಂಡಂತೆ ಗ್ರಾಮೀಣ, ನಗರ ಹಾಗೂ ಹೊರ ರಾಜ್ಯದ ಭಕ್ತಾದಿಗಳ ಅನುಕೂಲಕ್ಕಾಗಿ ಇ-ಪ್ರಸಾದ ಸೇವೆ ಆರಂಭಿಸಲಾಗಿದೆ. ರಾಜ್ಯದ ಯಾವುದೇ ಭಾಗದ ಭಕ್ತಾದಿಗಳು ಪ್ರಸಾದಕ್ಕೆ ಆರ್ಡರ್ ಮಾಡಿದರೆ ಸಿಎಸ್ಸಿ ಇ ಗವರ್ನೆನ್ಸ್ ಸಂಸ್ಥೆಯು ಮನೆ ಬಾಗಿಲಿಗೆ ತಲುಪಿಸಲಿದೆ ಎಂದು ಇಲಾಖೆ ಸಚಿವರು ಘೋಷಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post