ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ Shivrajkumar ಅವರನ್ನು ಟೀಕೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ Prashanth Sambargi ಇದೀಗ ಉಲ್ಟ ಹೊಡೆದಿದ್ದಾರೆ.
ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಇಳಿದ ಬೆನ್ನಲ್ಲೇ ಪ್ರಶಾಂತ್ ಸಂಬರ್ಗಿ ಸೋಶಿಯಲ್ ಮೀಡಿಯಾದಲ್ಲಿ ಅನೇಕ ಬಗೆಯ ಪೋಸ್ಟ್ಗಳನ್ನು ಶೇರ್ ಮಾಡಿದ್ದರು. ಇದು ಶಿವರಾಜ್ ಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಕಷ್ಟು ವಿರೋಧ, ಟೀಕೆ ವ್ಯಕ್ತವಾದ ನಂತರ ಪ್ರಶಾಂತ್ ಸಂಬರ್ಗಿ ತಾವು ಆಡಿದ ಮಾತನ್ನು ಹಿಂದಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮತ್ತೊಂದು ಪೋಸ್ಟ್ ಶೇರ್ ಮಾಡಿ, ಶಿವಣ್ಣ ಜೊತೆಗಿರುವ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
‘ಶಿವಣ್ಣ ಮತ್ತೆ ಇನೊಬ್ಬ ನಮ್ಮ ಆಪ್ತ ಮಿತ್ರ ನೊಂದಿಗೆ ಇದೀಗ ತಾನೇ ಮಾತನಾಡಿದೆ. ಶಿವಣ್ಣ ಅವರಿಗೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ಶಿವಣ್ಣ ಅವರು ತಂದೆಯ ಬಯಕೆಯಂತೆ ಅವರು ರಾಜಕೀಯದಿಂದ ದೂರವಾಗಿದ್ದರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಮತ್ತು ಶಿವಣ್ಣ ಮತ್ತು ಅವರ ಅಭಿಮಾನಿಗಳಿಗೆ ಕರ್ನಾಟಕದಾದ್ಯಂತ ನೋಯಿಸಬಾರದು ಎಂದು ನಾನು ಬಯಸುತ್ತೇನೆ’ ಎಂದು ಪೋಸ್ಟ್ ಶೇರ್ ಮಾಡಿ, ಶಿವಣ್ಣ ವಿರುದ್ಧ ನೀಡಿದ್ದ ಹೇಳಿಕೆ ವಾಪಾಸ್ ಪಡೆಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post