ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆರೋಗ್ಯ ವ್ಯವಸ್ಥೆಯಲ್ಲಿ ಹೆಚ್ಚು ಸುಧಾರಣೆ ತರಲು ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿದೆ. ಇದಕ್ಕಾಗಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಇದರ ಜೊತೆಗೆ ಅಸಾಂಕ್ರಾಮಿಕ ರೋಗಗಳ ಕುರಿತ ಅಂಕಿ ಅಂಶ ಸಂಗ್ರಹಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Minister Sudhakar ಹೇಳಿದರು.
KRSSDI ನಿಂದ ಆಯೋಜಿಸಿದ್ದ ಮಧುಮೇಹ ಕುರಿತ ರಾಜ್ಯ ಸಮ್ಮೇಳನದಲ್ಲಿ ಸಚಿವರು ಮಾತನಾಡಿದರು.
ಆಧುನಿಕ ತಂತ್ರಜ್ಞಾನಗಳ ಬಳಕೆಯ ಮೂಲಕ ಆಸ್ಪತ್ರೆ ಆರೈಕೆಯಿಂದ ಮನೆ ಆರೈಕೆಗೆ ಆರೋಗ್ಯ ವ್ಯವಸ್ಥೆಯನ್ನು ಬದಲಿಸಬೇಕಿದೆ. ವೈದ್ಯ ಕೇಂದ್ರಿತದಿಂದ ರೋಗಿ ಕೇಂದ್ರಿತ ವ್ಯವಸ್ಥೆಗೆ ಬದಲಾಗಬೇಕಿದೆ. ಆರೋಗ್ಯ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ತರಲು ಜಾಗೃತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಅವಶ್ಯವಾಗಿವೆ. ಮಾಹಿತಿ, ಶಿಕ್ಷಣ, ಸಂವಹನವಿದ್ದರೆ ಜನರಿಗೆ ಹೆಚ್ಚು ಉಪಯೋಗವಾಗುತ್ತದೆ. ಆರೋಗ್ಯದಲ್ಲಿ ಕರ್ನಾಟಕ ಪ್ರಗತಿ ಸಾಧಿಸಿದರೂ, ಮಾತೃ ಮರಣ, ಶಿಶು ಮರಣದಲ್ಲಿ ಹಿಂದುಳಿದಿದೆ. ಇದಕ್ಕಾಗಿ ಅರಿವು ಕಾರ್ಯಕ್ರಮ ಅಗತ್ಯ ಎಂದರು.

Also read: ಕಾರು-ಲಾರಿ ಮುಖಾಮುಖಿ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ
ನಿದ್ದೆಯಲ್ಲಿ ವ್ಯತ್ಯಾಸ, ನಿಯಮಿತ ವ್ಯಾಯಾಮ ಹಾಗೂ ಉತ್ತಮ ಆಹಾರ ಪದ್ಧತಿ ಇಲ್ಲದಿದ್ದರೆ, ಮಧುಮೇಹ ಉಂಟಾಗುತ್ತದೆ. ಭಾರತ ಈಗ ಮಧುಮೇಹಿಗಳ ಕೇಂದ್ರವಾಗಿರುವುದು ಬಹಳ ಬೇಸರದ ಸಂಗತಿ. ಈಗಿನ ಕಾಲದಲ್ಲಿ ಆಹಾರ ಪದ್ಧತಿಯಲ್ಲಿ ಬಹಳ ಬದಲಾವಣೆ ಉಂಟಾಗಿದೆ. ಅಭಿವೃದ್ಧಿ ಉತ್ತಮವಾಗಿ ಆಗುತ್ತಿದ್ದರೂ, ಆರೋಗ್ಯ ದೃಷ್ಟಿಯಿಂದ ಇದನ್ನು ನೋಡಿದರೆ ನಾವು ಹಿಮ್ಮುಖವಾಗಿ ಚಲಿಸುತ್ತಿದ್ದೇವೆ ಎಂದೆನಿಸುತ್ತದೆ ಎಂದರು.

ಈ ಸಮ್ಮೇಳನದಲ್ಲಿ ಮಧುಮೇಹದ ನಿವಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸರ್ಕಾರಕ್ಕೆ ಸಲಹೆ ನೀಡಬಹುದು. ಇದರಿಂದ ಕಾರ್ಯಕ್ರಮಗಳನ್ನು ಜಾರಿ ಮಾಡಲು ನೆರವಾಗುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post