ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಪವರ್ ಸ್ಟಾರ್, ನಟ ಡಾ.ಪುನೀತ್ ರಾಜಕುಮಾರ್ Power Star Puneeth Rajkumar ಅವರಿಗೆ ಮರಣೋತ್ತರವಾಗಿ ಇಂದು ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಜ್ಯದ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಹಾಗೂ ಸಹಕಾರ ಸಂಸ್ಥೆಗಳ ಅಭಿವೃದ್ಧಿಗೆ ಯಾವುದೇ ರೀತಿಯಲ್ಲೂ ಪ್ರತಿಫಲಾಪೇಕ್ಷೆ ನಿರೀಕ್ಷಿಸದೇ ಶ್ರಮಿಸಿದ ಪುನೀತ್ ರಾಜಕುಮಾರ್ ಅವರ ಅನುಪಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.
Also read: ಬೆಲೆಯೇರಿಕೆ ವಿರೋಧಿಸಿ ಹೋರಾಟ ಮಾಡಲು ತೀರ್ಮಾನ: ವಿಪಕ್ಷ ನಾಯಕ ಸಿದ್ದರಾಮಯ್ಯ
ಸದಾಶಿವನಗರದಲ್ಲಿರುವ ಪುನೀತ್ ಅವರ ನಿವಾಸದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ Ashwini Puneeth Rajkumar ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್, Minister S.T. Somashekar ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post