ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 5 ದಿನಗಳ ಕಾಲ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ 14ನೇ ಆವೃತ್ತಿಗೆ ಪ್ರಧಾನಿ ನರೇಂದ್ರ ಮೋದಿ PM Narendra Modi ಇಂದು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಸ್ಮರಣಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದರು. ಭಾರತ ನಿರ್ಮಿತ ಯುದ್ಧ ವಿಮಾನ, ಹೆಲಿಕಾಪ್ಟರ್ ಹಾಗೂ ತಂತ್ರಜ್ಞಾನಗಳ ಪ್ರದರ್ಶನಕ್ಕಾಗಿಯೇ ಪ್ರತ್ಯೇಕವಾಗಿ ಇಂಡಿಯನ್ ಪೆವಿಲಿಯನ್ ನಿರ್ಮಾಣ ಮಾಡಲಾಗಿದೆ. ಇದರಲ್ಲಿ 115 ಕಂಪನಿಗಳು ಹಾಗೂ 227 ಉತ್ಪನ್ನಗಳ ಪ್ರದರ್ಶನ ನಡೆಯಲಿದೆ. ಇದರಲ್ಲಿ 149 ಉತ್ಪನ್ನಗಳನ್ನು ಭೌತಿಕವಾಗಿಯೇ ಪ್ರದರ್ಶಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post