ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರು ನವೆಂಬರ್ 11ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ವೇಳೆ 3 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಅಂದೇ ರಾಷ್ಟ್ರ ರಾಜಧಾನಿ ದೆಹಲಿಗೆ ವಾಪಸ್ಸಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಕುರಿತು ಮಾಹಿತಿ ನೀಡಿದರು.
ಮುಂದಿನ ವರ್ಷ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ, ಇಂತಹ ಸಂದರ್ಭದಲ್ಲಿ ಮೋದಿ ಭೇಟಿ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಲಿದೆ ಎಂದರು.
ನವೆಂಬರ್ 11ರ ಶುಕ್ರವಾರ ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಶಾಸಕರ ಭವನದ ಆವರಣದಲ್ಲಿ ಕನಕದಾಸರ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ. ಬಳಿಕ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
Also read: ದಕ್ಷಿಣ ಭಾರತದಿಂದ ದೊಡ್ಡ ಧ್ವನಿಯಾಗಿ ಬೆಳೆದಿರುವವರು ಖರ್ಗೆ: ಡಿ.ಕೆ. ಶಿವಕುಮಾರ್ ಅಭಿಪ್ರಾಯ
ಇದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಾಗಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ರೈಲು 497 ಕಿ. ಮೀ. ದೂರವನ್ನು ಕೇವಲ 6 ಗಂಟೆ 40 ನಿಮಿಷದಲ್ಲಿ ಕ್ರಮಿಸಲಿದೆ. ಭಾರತದ 5ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇದಾಗಿದೆ ಎಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಮಾಡಿರುವ 2ನೇ ಟರ್ಮಿನಲ್ ಅನ್ನು ಮೋದಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣಗೊಂಡಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಪ್ರತಿಮೆ ಲೋಕಾರ್ಪಣೆ ಮಾಡಿದ ಬಳಿಕ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಿದ್ದಾರೆಂದು ಮಾಹಿತಿ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post