No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ನೀಡಿದವರು ಪ್ರಧಾನಿ ನರೇಂದ್ರ ಮೋದಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

kalpa News by kalpa News
June 23, 2021
in ಬೆಂಗಳೂರು ನಗರ, ರಾಷ್ಟ್ರೀಯ
0
ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ನೀಡಿದವರು ಪ್ರಧಾನಿ ನರೇಂದ್ರ ಮೋದಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಭಾರತದಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ಮಾಡಿದರೂ ದೇಶದ ಜನರಿಗೆ ಅದರ ಪ್ರಯೋಜನ ಸಿಗುತ್ತಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು, 46 ಕೋಟಿ ಜನರ ಬ್ಯಾಂಕ್ ಖಾತೆಗಳನ್ನು ಜನಧನ್ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆಯನ್ನು (ಡಿಬಿಟಿ) ಅನುಷ್ಠಾನಕ್ಕೆ ತಂದರು. ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಇಲ್ಲದ ಯೋಜನೆ ಇದಾಗಿದೆ. ಭ್ರಷ್ಟಾಚಾರದಲ್ಲೇ ಮುಳುಗಿದ್ದ ಕಾಂಗ್ರೆಸ್ ಮುಖಂಡರು ಮತ್ತು ನಾಯಕರು ಇದರಿಂದ ವಿಲವಿಲ ಒದ್ದಾಡುವಂತಾಗಿದೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವರಾದ ಪ್ರಲ್ಹಾದ ಜೋಶಿ ಅವರು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಮಟ್ಟದ ಇ ಪ್ರಶಿಕ್ಷಣ ಚಿಂತನ ವರ್ಗದಲ್ಲಿ ವೆಬೆಕ್ಸ್ ಮೂಲಕ ಮಾತನಾಡಿದ ಅವರು, ಒಂದು ದೇಶದಲ್ಲಿ ಎರಡು ಕಾಯ್ದೆ ಇರಬಾರದು ಎಂಬ ಚಿಂತನೆ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರದಾಗಿತ್ತು. ಅದನ್ನು ವಿಶ್ವವಂದ್ಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇóಷ ಸ್ಥಾನಮಾನವನ್ನು ರದ್ದು ಪಡಿಸುವ ಮೂಲಕ ಈಡೇರಿಸಿದ್ದಾರೆ ಎಂದು ವಿವರಿಸಿದರು.

ದೇಶದ ಸಾರ್ವಭೌಮತೆ ಮತ್ತು ಏಕತೆಗೆ ವಿಶಿಷ್ಟ ಕೊಡುಗೆ ನೀಡಿದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಕನಸನ್ನು ನನಸಾಗಿಸುವತ್ತ ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ನಮ್ಮ ಕಾರ್ಯಕರ್ತರು ಮತ್ತು ಜನರಿಗೆ ಮಾಹಿತಿ ಕೊಡಬೇಕಾಗಿದೆ ಎಂದು ಅವರು ಕರೆ ನೀಡಿದರು.

ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರಕಾರವು ರೈತರಿಗೆ ನೆರವಾಗುತ್ತಿದೆ. ರೈತರು ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದರು. ಹಿಂದೆ ರಾಜ್ಯದ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಮಾತ್ರ ವಿಮಾನನಿಲ್ದಾಣಗಳಿದ್ದವು. ಈಗ ಉಡಾಣ್ ಯೋಜನೆಯಡಿ ಹುಬ್ಬಳ್ಳಿ, ಬೆಳಗಾವಿ, ತೋರಣಗಲ್, ಬೀದರ್ ಮತ್ತು ಕಲಬುರ್ಗಿಯಲ್ಲಿ ವಿಮಾನನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇದು ಕೇಂದ್ರ ಸರಕಾರದ ಮಹತ್ವದ ಕೊಡುಗೆ ಎಂದು ವಿವರಿಸಿದರು.

ಜಲ ಮಿಷನ್ ಯೋಜನೆಯು ಪ್ರಧಾನಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಇದರಡಿ ಲಕ್ಷಾಂತರ ಹಳ್ಳಿಗಳಿಗೆ ಪ್ರಯೋಜನ ಲಭಿಸಲಿದೆ. ಉಜಾಲಾ ಯೋಜನೆಯಡಿ ಲಕ್ಷಾಂತರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮೂಲಸೌಕರ್ಯ ಹೆಚ್ಚಳಕ್ಕೆ ಭಾರತವು ಕಳೆದ ಏಳು ವರ್ಷಗಳಲ್ಲಿ ಗರಿಷ್ಠ ಆದ್ಯತೆ ನೀಡಿದೆ. ಅತ್ಯುತ್ತಮ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. ಮೈಸೂರು- ಬೆಂಗಳೂರು, ಬೆಂಗಳೂರು- ಚೆನ್ನೈ ಕಾರಿಡಾರ್ ರಸ್ತೆ ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಅವರು ತಿಳಿಸಿದರು.

ಜೂನ್ 21ರಂದು ವಿಶ್ವ ಯೋಗ ದಿನಾಚರಣೆ ದಿನದಂದು ದೇಶದಲ್ಲಿ ಸುಮಾರು 86 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇದೊಂದು ದೊಡ್ಡ ಸಾಧನೆ. ಆಕ್ಸಿಜನ್ ಪೂರೈಕೆಯನ್ನು 900 ಮೆಟ್ರಿಕ್ ಟನ್‍ನಿಂದ 9 ಸಾವಿರ ಮೆಟ್ರಿಕ್ ಟನ್‍ಗೆ ಹೆಚ್ಚಿಸಿರುವುದು, ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಸುಸಜ್ಜಿತಗೊಳಿಸಿದ್ದು ಕೂಡ ಕೋವಿಡ್ ಸಂದರ್ಭದ ಸಮರ್ಪಕ ನಿರ್ವಹಣೆಗೆ ಉದಾಹರಣೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷವು ಗರೀಬಿ ಹಠಾವೋ ಘೋಷಣೆಯು ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿತ್ತು. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದ ಕಾಲದಲ್ಲಿ ಭ್ರಷ್ಟಾಚಾರ ಪ್ರಮಾಣ ಮಿತಿ ಮೀರಿತ್ತು. ಆದರೆ, ಶ್ರೀ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭ್ರಷ್ಟಾಚಾರರಹಿತವಾಗಿ ಯೋಜನೆಯ ಪ್ರಯೋಜನವು ಫಲಾನುಭವಿಗಳಿಗೆ ಲಭಿಸುತ್ತಿದೆ ಎಂದು ತಿಳಿಸಿದರು.

ಜಗನ್ನಾಥ ರಾವ್ ಜೋಶಿ ಅವರ ಒಡನಾಟವು ನನ್ನ ಬೆಳವಣಿಗೆಗೆ ಅನನ್ಯ ಕೊಡುಗೆ ನೀಡಿದೆ ಎಂದು  ಪ್ರಲ್ಹಾದ ಜೋಶಿ ಅವರು ವಿವರಿಸಿದರು. ಬೆಂಗಳೂರಿನಿಂದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ ಹಿರೇಮನೆ ಅವರು ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸಿದ್ದರು.

ರಾಜ್ಯ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಪ್ರಭಾರಿ ಹಾಗೂ ಸಹ ಪ್ರಭಾರಿಗಳು, ವಿಭಾಗ ಸಂಘಟನಾ ಕಾರ್ಯದರ್ಶಿ ಹಾಗೂ ಸಹ ಸಂಘಟನಾ ಕಾರ್ಯದರ್ಶಿಗಳು, ರಾಜ್ಯ ಪ್ರಶಿಕ್ಷಣ ತಂಡ, ಜಿಲ್ಲಾ ಪ್ರಭಾರಿಗಳು, ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಸಂಸದರು, ಶಾಸಕರು, ಎಲ್ಲಾ ಪ್ರಕೋಷ್ಠಗಳ ರಾಜ್ಯ ಸಂಚಾಲಕರು ಮತ್ತು ಸಹ ಸಂಚಾಲಕರು ಈ ಪ್ರಶಿಕ್ಷಣ ವರ್ಗದಲ್ಲಿ ವೆಬೆಕ್ಸ್ ಮೂಲಕ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCentral Minister Pralhad JoshiKannada NewsKannada News LiveKannada News OnlineKannada News WebsiteKannada WebsiteLatest News KannadaNational NewsNews in KannadaNews KannadaPM Narendra Modiಕೇಂದ್ರ ಸಚಿವ ಪ್ರಲ್ಹಾದ ಜೋಶಿಪ್ರಧಾನಿ ನರೇಂದ್ರ ಮೋದಿಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಜೂನ್ 25ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಮಗ್ರ ಅಭಿವೃದ್ಧಿಗೆ ಅಗತ್ಯ ನೆರವು: ಸಂಸದ ಬಿ.ವೈ.ರಾಘವೇಂದ್ರ

kalpa News

kalpa News

Next Post
ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಮಗ್ರ ಅಭಿವೃದ್ಧಿಗೆ ಅಗತ್ಯ ನೆರವು: ಸಂಸದ ಬಿ.ವೈ.ರಾಘವೇಂದ್ರ

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಮಗ್ರ ಅಭಿವೃದ್ಧಿಗೆ ಅಗತ್ಯ ನೆರವು: ಸಂಸದ ಬಿ.ವೈ.ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL