ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಪ್ರತಿದಿನ ಹೆಚ್ಚುತ್ತಲೇ ಇದ್ದು, ಸಾರ್ವಜನಿಕರು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂ. ಹಣ ಖರ್ಚು ಮಾಡಿ ಎಲ್ಲಾ ದಿನಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಗುಮೊಗದ ಜಾಹೀರಾತುಗಳನ್ನು ನೀಡಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೆಟ್ರೋ ೨ನೆಯ ಹಂತದ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡಿರುವುದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡುವ ಅನುದಾನ ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ಅಗತ್ಯವಿರಲಿಲ್ಲ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಬೇಜವಬ್ಧಾರಿ ನಿರ್ಧಾರವಾಗಿ ಎಂದು ಹೇಳಿದ್ದಾರೆ.
ಕೊರೋನಾದಿಂದಾಗಿ ಇಡೀ ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವ ಸಂದರ್ಭದಲ್ಲಿ ಜಾಹೀರಾತು ಮೂಲಕ ಪ್ರಚಾರ ಪಡೆದುಕೊಳ್ಳುತ್ತಿರುವುದನ್ನು ಕುಮಾರಸ್ವಾಮಿಯವರು ಖಂಡಿಸಿದ್ದಾರೆ. ಹಾಗೂ ಜಾಹೀರಾತುಗಳಿಗೆ ವೆಚ್ಚ ಮಾಡುತ್ತಿರುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಳ್ಳಬಹುದಾಗಿತ್ತು ಎಂದು ಹೇಳಿದ್ದಾರೆ.
ಕೊರೊನಾ ವೈರಸ್ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ!
1/5— H D Kumaraswamy (@hd_kumaraswamy) April 22, 2021
ಸರ್ಕಾರ ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ ನಡೆದಿರಬಹುದಾಧ ಭ್ರಷ್ಟಾಚಾರದ ಬಗ್ಗೆ ಆರೋಪಗಳಿದ್ದರೂ ಕೊರೋನಾ ವಿರುದ್ಧದ ಹೋರಾಟದಲ್ಲಿ ಗೊಂದಲ ಪರಿಸ್ಥಿತಿ ನಿರ್ಮಾಣವಾಗಬಾರದು ಎನ್ನುವ ಕಾರಣದಿಂದ ಸುಮ್ಮನಿದ್ದೆವು ಆದರೆ ಈ ರೀತಿಯ ಪ್ರಚಾರ ಪ್ರಿಯತೆಯನ್ನು ಸಹಿಸಲಾಗುವುದುದಿಲ್ಲ ಎಂದಿದ್ದಾರೆ.
ಇಂತಹ ಕಷ್ಟ ಸಮಯದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಜಾಹೀರಾತು ನೀಡುವ ಮೂಲಕ ಪ್ರಚಾರದಲ್ಲಿ ತೊಡಗಬಾರದಿತ್ತು ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post