ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆರ್’ಎಸ್’ಎಸ್ #RSS ಕುರಿತಾಗಿ ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ #Priyanka Kharge ಬರೆದಿರುವ ಪತ್ರ ವಿವಾದವಾದ ಬೆನ್ನಲ್ಲೇ, ಅವರೇ ಮತ್ತೊಂದು ಪತ್ರ ಬರೆದಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ.
ಸರ್ಕಾರಿ ಸಂಸ್ಥೆಗಳಲ್ಲಿ ಆರ್’ಎಸ್’ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸುತ್ತೊಲೆ ಹೊರಡಿಸುವಂತೆ ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಒಂದು ಪತ್ರ ವಿವಾದ ಸೃಷ್ಠಿಯಾಗಿರುವ ಬೆನ್ನಲ್ಲೇ ಮತ್ತೊಂದು ಪತ್ರ ಬರೆದಿರುವುದು ಬಿಜೆಪಿ ಹಾಗೂ ಬಲಪಂಥೀಯರ ಕಣ್ಣನ್ನು ಕೆಂಪಾಗಿಸಿದೆ.

ರಾಜ್ಯ ಸರ್ಕಾರಿ ನೌಕರರು ಆರ್’ಎಸ್’ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬಂದಿದೆ.
ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021 ಅಡಿ ನಿಯಮ 5(1) ಪ್ರಕಾರ, ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post