ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರು (ಆಡಳಿತ, ಅಭಿವೃದ್ಧಿ, ಪದವಿ ಪೂರ್ವ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳೊಂದಿಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ #Minister Madhu Bangarappa ಅವರು ಇಂದು ವೀಡಿಯೋ ಸಂವಾದ ನಡೆಸಿದರು.
ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ (ಎಸ್.ಎಸ್.ಕೆ) ಭವನದಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯ ಹಾಗೂ ಕಾರ್ಯಕ್ರಮಗಳ ಪ್ರಗತಿ ಕುರಿತು ತಮ್ಮ ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ವಿಚಾರಗಳ ಕುರಿತು ವೀಡಿಯೋ ಸಂವಾದದ ಮೂಲಕ ಸಮಗ್ರವಾಗಿ ಚರ್ಚಿಸಲಾಯಿತು.
Also read: ರಾಜಕೀಯ ದುರುದ್ದೇಶದಿಂದ ಲೋಕಾಯುಕ್ತಕ್ಕೆ ED ಪತ್ರ: ಸಿಎಂ ಸಿದ್ದರಾಮಯ್ಯ
ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ತ್ರಿಲೋಕ ಚಂದ್ರ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post