ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಸರ್ಕಾರ ರಾಜ್ಯಕ್ಕೆ ತೋರುತ್ತಿರುವ ಮಲತಾಯಿ ಧೋರಣೆ ವಿರೋಧಿಸಿ ಫೆ.7ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 44 ಗಂಟೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಹೇಳಿದರು.
ವಿಧಾನ ಸೌಧದಲ್ಲಿ ಡಿಸಿಎಂ ಶಿವಕುಮಾರ್ DCM DK Shivakumar ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಶಾಸಕರು, ಸಚಿವರು ಭಾಗಿಯಾಗಲಿದ್ದಾರೆ. ಧರಣಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣದಲ್ಲಿ ಮೋಸವಾಗುತ್ತಿದೆ. ತೆರಿಗೆ ಹಂಚಿಕೆ ಕಡಿತದಿಂದ ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ 62,098 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
Also read: ಫೆ.12-14 ಕಾರಣಗಿರಿ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ದೇಗುಲದ ಜಾತ್ರಾ ಮಹೋತ್ಸವ
ನಾಳೆ ಸಂಜೆಯೇ ದೆಹಲಿಗೆ ಹೋಗುತ್ತೇವೆ. ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಈವರೆಗೆ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಆದರೆ ಈಗ ಅನಿವಾರ್ಯವಾಗಿದೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post