ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರದ್ದು ಪಡಿಸಿರುವ ಪಿ ಎಸ್ ಐ ಪರೀಕ್ಷೆಯ ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಹೇಳಿದರು.
ಸಚಿವರು, ಇಂದು, ತಮ್ಮ ನಿವಾಸದಲ್ಲಿ ಭೇಟಿಯಾದ ಪಿಎಸ್ ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳಿಗೆ, ಈ ಕುರಿತು ಭರವಸೆ ನೀಡಿದ್ದು, ಮರು ಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರಕಾರ ನಿರ್ಧಾರ ಕೈಗೊಳ್ಳಲಿದೆ, ಎಂದರು.

ರದ್ದಾದ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲಾ 56000 ಅಭ್ಯರ್ಥಿ ಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದರು
Also read: ಹರ್ ಘರ್ ತಿರಂಗ ಅಭಿಯಾನದ ಕುರಿತು ಮಾಹಿತಿ ಕಾರ್ಯಾಗಾರ ಆಯೋಜಿಸಿ: ಶಂಕರ್ ಶೇಟ್ ಮನವಿ
ಮರು ಪರೀಕ್ಷೆ ನಡೆಸುವುದು ತಡವಾದರೆ, ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ, ಪರೀಕ್ಷೆ ತಯಾರಿ ಮುಂದುವರೆಸಿ, ಎಂದು ಸಚಿವರು, ಕಿವಿಮಾತು ಹೇಳಿದರು.










Discussion about this post