ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗಾಗಿ 208 ದಿನಗಳಿಂದ ನಡೆಸುತ್ತಿದ್ದ ಎಸ್.ಸಿ, ಎಸ್.ಟಿ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟಕ್ಕೆ ಕೊನೆಗೂ ಗೆಲುವು ದಕ್ಕಿದೆ. ಅಹೋರಾತ್ರಿ ಹೋರಾಟ ನಡೆಸುತ್ತಿರುವವರಿಗೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ Minister H.C. Mahadevappa ಆದೇಶ ಪತ್ರ ನೀಡಿದ ಹಿನ್ನೆಲೆಯಲ್ಲಿ ಹೋರಾಟಗಾರರು ಪ್ರತಿಭಟನೆ ಕೈಬಿಟ್ಟಿದ್ದಾರೆ.
ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾಕಾರರನ್ನು ಭೇಟಿಯಾದ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸರ್ಕಾರ ದಲಿತ ಸಮುದಾಯದ ಹಿತ ರಕ್ಷಣೆಗೆ ಬದ್ಧವಾಗಿದ್ದು, ವಿಶೇಷವಾಗಿ ಭೂಮಿ ರಕ್ಷಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. ಮೊದಲ ಹಂತದಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

Also read: ಶಿವಮೊಗ್ಗ-ಬೆಂಗಳೂರು ವಿಮಾನ ಅಧಿಕ ಪ್ರಯಾಣ ದರದ ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು?
ಹೋರಾಟ ಸಮಿತಿ ಮುಖ್ಯಸ್ಥ ಮಂಜುನಾಥ್ ಮಾತನಾಡಿ, ಚಿತ್ರದುರ್ದಲ್ಲಿ ನಾವು ನೋರಾಟ ಆರಂಭಿಸಿದ ಸಂದರ್ಭದಲ್ಲಿ ವಿರೋದ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ ಶಿವಕುಮಾರ್, ಹೆಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ ಹಲವು ಮುಖಂಡರು ನೀಡಿದ್ದ ಭರವಸೆ ಇದೀಗ ಈಡೇರಿದೆ. ಕಾಂಗ್ರೆಸ್ ಸರ್ಕಾರ ನಮಗೆ ಶಾಶ್ವತ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಿದೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post