No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಕಾಯ್ದೆ ಜಾರಿಗೊಳಿಸಲು ಜನ ಜಾಗೃತಿ: ಸಚಿವ ಈಶ್ವರ ಖಂಡ್ರೆ

ಎರಡು ದಿನಗಳ ರೀ ಕಾಮರ್ಸ್‌ ಎಕ್ಸ್‌ ಪೋ ಗೆ ಅರಮನೆ ಮೈದಾನದಲ್ಲಿ ಚಾಲನೆ

kalpa News by kalpa News
August 9, 2023
in ಬೆಂಗಳೂರು ನಗರ
0
ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಕಾಯ್ದೆ ಜಾರಿಗೊಳಿಸಲು ಜನ ಜಾಗೃತಿ: ಸಚಿವ ಈಶ್ವರ ಖಂಡ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೈಗಾರಿಕೆಗಳಿಂದ ಉತ್ಪಾದನೆಯಾಗುವ ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ [Extended producer Responsibility act] ಇದ್ದು, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಜನ ಜಾಗೃತಿ ಮೂಡಿಸಲಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಈಶ್ವರ್‌ ಖಂಡ್ರೆ Eshwar Khandre ಹೇಳಿದ್ದಾರೆ.

ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿಂದು ಅವರು ದುರಸ್ತಿ, ನವೀಕರಣ ಮತ್ತು ಮರು ಸಂಸ್ಕರಣೆ ಕುರಿತಂತೆ ಕರಡು ಕಾರ್ಯಸೂಚಿ ಸಿದ್ಧಪಡಿಸಲು ಆಯೋಜಿಸಿರುವ ಎರಡು ದಿನಗಳ ರೀ ಕಾಮರ್ಸ್‌ ಎಕ್ಸ್‌ ಪೋ – 2023 ಅನ್ನು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌, ಸಣ್ಣ, ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣ ಬಸಪ್ಪ ದರ್ಶನಾಪುರ್‌ ಭಾಗವಹಿಸಿದ್ದರು.
ಸಚಿವ ಈಶ್ವರ ಖಂಡ್ರೆ ಮಾತನಾಡಿ, ಕೈಗಾರಿಕೆಗಳಿಂದ ಉತ್ಪಾದನೆಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ಮರು ಸಂಸ್ಕರಣೆ ಮಾಡುವುದು ಕೈಗಾರಿಕೆಗಳ ಜವಾಬ್ದಾರಿ. ಈ ಕುರಿತು ಅಸ್ಥಿತ್ವದಲ್ಲಿರುವ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಎಲ್ಲಾ ಪಾಲುದಾರರನ್ನು ವಿಶ್ವಾಸಕ್ಕೆ ಪಡೆದು ಅರಿವು ಮೂಡಿಸಲಾಗುವುದು ಎಂದರು.

ಬೆಂಗಳೂರು ಜಾಗತಿಕ ಐಟಿ ರಾಜಧಾನಿಯಾಗಿದ್ದು, ಇಲ್ಲಿ ಉತ್ಪಾದನೆಯಾಗುವ ಇ ತ್ಯಾಜ್ಯ ನಿವಾರಣೆ ಅತ್ಯಂತ ಮಹತ್ವದ್ದಾಗಿದೆ. ಇದನ್ನು ಸರಿಯಾಗಿ ನಿರ್ವಹಿಸದಿದ್ದರೆ ಸಾಕಷ್ಟು ಅನಾರೋಗ್ಯ ಸಮಸ್ಯೆಗಳು ಎದುರಾಗಲಿವೆ. ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ ಜಾರಿಗೊಳಿಸಿದರೆ ಇಂತಹ ಸಮಸ್ಯೆಗಳಿಗೆ ಸಾಕಷ್ಟು ಪರಿಹಾರ ದೊರೆಯಲಿದೆ ಎಂದು ಹೇಳಿದರು.

ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡಬೇಕಾಗಿದ್ದು, ಇದಕ್ಕಾಗಿ ವಿಶೇಷವಾಗಿ ಸಂಸ್ಕರಣಾ ವಲಯದಲ್ಲಿ ಕಾರ್ಯನಿರ್ವಹಿಸಲಿರುವ ಕೈಗಾರಿಕೆಗಳಿಗೆ ಸರ್ಕಾರ ಸೂಕ್ತ ಸಹಕಾರ ಮತ್ತು ನೆರವು ನೀಡಲಿದೆ. ಕರ್ನಾಟಕವನ್ನು ಪರಿಸರ ಸ್ನೇಹಿಯಾಗಿ ಮಾಡುವ ಜೊತೆಗೆ ಈ ವಲಯದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಜನೆಗೆ ಒತ್ತು ನೀಡಲಾಗುವುದು. ಅನೇಕ ಕೈಗಾರಿಕೋದ್ಯಮಗಳು ಒಂದುಗೂಡಿ ರೀ ಕಾಮರ್ಸ್‌ ಎಕ್ಸ್‌ ಪೋ ಆಯೋಜಿಸಿರುವುದು ಉತ್ತಮ ಬೆಳವಣಿಗೆ ಎಂದರು.
ಜಗತ್ತಿನಲ್ಲಿ ಅತಿ ದೊಡ್ಡ ಸಮಸ್ಯೆ ಎಂದರೆ ಅದು ಮಾಲೀನ್ಯ, ಆಹಾರ, ನೀರು, ಗಾಳಿ ಸೇರಿ ಎಲ್ಲಾ ವಲಯಗಳು ಮಲಿನಗೊಂಡಿವೆ. ಹವಾಮಾನ ವೈಪರಿತ್ಯ ಜಾಗತಿಕ ತಾಪಮಾನಕ್ಕೂ ತ್ಯಾಜ್ಯ ಕಾರಣವಾಗಿದೆ. ಏಕ ಬಳಕೆ ಪ್ಲಾಸ್ಟಿಕ್‌ ನಿಷೇಧದಿಂದ ಸಾಕಷ್ಟು ಪರಿಹಾರವಿದ್ದು, ಜೊತೆಗೆ ಇ ತ್ಯಾಜ್ಯ ಇತ್ಯರ್ಥ ಮಾಡದಿದ್ದರೆ ಅನೇಕ ರೋಗಗಳು ಬರುತ್ತವೆ ಎಂಬುದನ್ನು ಸಹ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದರು.

ನಾವು ಅಭಿವೃದ್ಧಿ ಜೊತೆಗೆ ಪ್ರಕೃತಿ, ಪರಿಸರ, ಅರಣ್ಯ, ಜಲಮೂಲಗಳನ್ನೂ ಸಂರಕ್ಷಿಸಬೇಕು. ತಂತ್ರಜ್ಞಾನದ ನೆರವು ಪಡೆದು ಸಕಲ ಜೀವ, ಸಸ್ಯ ಸಂಕುಲ ಉಳಿಸಬೇಕು. ರಾಜ್ಯದ ಹಸಿರು ವ್ಯಾಪ್ತಿ ಹೆಚ್ಚಿಸಲು 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಿರುವುದಾಗಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
“ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ”, “ಸರಕುಗಳು ಮತ್ತು ವಸ್ತುಗಳ ಮರುಬಳಕೆ” ಮತ್ತು “ವೃತ್ತಾಕಾರದ ಆರ್ಥಿಕತೆ” ಇಂದಿನ ಅಗತ್ಯವಾಗಿದೆ. ಈ ಪ್ರಕೃತಿಯಲ್ಲಿ ನಿರುಪಯುಕ್ತವಾದ ವಸ್ತು ಯಾವುದೂ ಇಲ್ಲ. ಎಲ್ಲ ವಸ್ತುಗಳ ಸಮರ್ಪಕ ಬಳಕೆ ಮಾಡುವುದನ್ನು ಕಲಿತರೆ, ಪ್ರಕೃತಿ, ಪರಿಸರ ಸಂಪನ್ಮೂಲ ಉಳಿಸಬಹುದು ಎಂದರು.

ರೀ ಕಾರ್ಮಸ್‌ ಏಕ್ಸ್‌ ಪೋ ಅಯೋಜಕ ಮತ್ತು ಊರ್ಧವ್‌ ಮ್ಯಾನೇಜ್ಮೆಂಟ್‌ ಸಂಸ್ಥೆಯ ಸಂಸ್ಥಾಪಕ ವೆಂಕಟ್‌ ರೆಡ್ಡಿ ಪಾಟೀಲ್‌ ಮಾತನಾಡಿ, ಜಗತ್ತಿನಲ್ಲಿ ಮರು ಸಂಸ್ಕರಣೆ ಅತ್ಯಂತ ಅಗತ್ಯವಾಗಿರುವ ವಲಯವಾಗಿದ್ದು, ಪರಿಸರ ಸಂರಕ್ಷಣೆಗೆ ಈಗಲೇ ಎಚ್ಚೆತ್ತುಕೊಳ್ಳಬೇಕಾಗಿದೆ. ಇದಕ್ಕಾಗಿ ಅಗತ್ಯ ಕರಡು ಕಾರ್ಯಸೂಚಿ ತಯಾರಿಸಲು ದೇಶದ ಪ್ರಮುಖ ತಜ್ಞರು ಮತ್ತು ಕೈಗಾರಿಕೋದ್ಯಮಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋಟೆಗಂಗೂರು ಗ್ರಾ.ಪಂ ಅಧ್ಯಕ್ಷರಾಗಿ ಡಿಬಿ ವಿಜಯಕುಮಾರ್, ಉಪಾಧ್ಯಕ್ಷರಾಗಿ ರೇಖಾಬಾಯಿ ಆಯ್ಕೆ

Next Post

ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ತೆರೆಯಲು ಆರ್ಥಿಕ ನೆರವು ನೀಡಿ

kalpa News

kalpa News

Next Post
ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ತೆರೆಯಲು ಆರ್ಥಿಕ ನೆರವು ನೀಡಿ

ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ತೆರೆಯಲು ಆರ್ಥಿಕ ನೆರವು ನೀಡಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL