ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಾದ್ಯಂತ ಜುಲೈ 3ನೆಯ ವಾರದಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿರುವ ಬೆನ್ನಲ್ಲೇ ಇಂದು ಮಾರ್ಗಸೂಚಿಯೂ ಸಹ ಬಿಡುಗಡೆಯಾಗಿದೆ.
ಈ ಕುರಿತಂತೆ ಇಲಾಖೆ ಮಹತ್ವದ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಪರೀಕ್ಷೆಗಾಗಿ ಅಗತ್ಯವಿರುವ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಮಾರ್ಗಸೂಚಿಯಲ್ಲೇನಿದೆ?
ಪರೀಕ್ಷಾ ವೇಳೆಯೊಳಗೆ ಒಂದು ಡೋಸ್ ಲಸಿಕೆ ಕಡ್ಡಾಯ.
ಪ್ರತಿದಿನವೂ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಪರೀಕ್ಷಾ ಕೇಂದ್ರ, ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳ ಸ್ಯಾನಿಟೈಜೇಷನ್ ಕಡ್ಡಾಯ.
ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಜ್ ಮಾಡುವುದು, ಒಂದು ಬೆಂಚ್’ಗೆ ಒಬ್ಬ ಪರೀಕ್ಷಾರ್ಥಿಯಂತೆ ಕೊಠಡಿಯಲ್ಲಿ 12 ಮಕ್ಕಳಿಗೆ ಮಾತ್ರ ಅವಕಾಶ.
ಪರೀಕ್ಷಾ ಕೇಂದ್ರಕ್ಕೆ ಆಗಮನ ಮತ್ತು ನಿರ್ಗಮನ ಹಾಗೆಯೇ ಕೊಠಡಿ ಪ್ರವೇಶ ಸಮಯದಲ್ಲಿ ದೈಹಿಕ ಅಂತರ ಕಡ್ಡಾಯ
ಮನೆಯಿಂದ ನೀರಿನ ಬಾಟಲ್ ಮತ್ತು ಊಟದ ಡಬ್ಬಿ ತರುವುದಕ್ಕೆ ಅವಕಾಶ.
ಗ್ರಾಮೀಣ ವಿಭಾಗದ ಅಭ್ಯರ್ಥಿಗಳು ಸಾಧ್ಯವಾದಷ್ಟು ಸ್ಥಳೀಯ ಮಟ್ಟದಲ್ಲೇ ಪರೀಕ್ಷಾ ಕೇಂದ್ರಕ್ಕೆ ವ್ಯವಸ್ಥೆ ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಬೇಕು.
ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಪಲ್ಸ್‌ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರಬೇಕು.
ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್’ಗಳಲ್ಲೇ ಮಾಸ್ಕ್ ವಿತರಣೆ.
ಆರೋಗ್ಯ ಇಲಾಖೆಯೊಂದಿಗೆ ಸಹಕಾರದೊಂದಿಗೆ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನ ಮೀಸಲು
ಸಿಬ್ಬಂದಿ ಫೇಸ್ ಶೀಲ್ಡ್.
ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪರೀಕ್ಷಾರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆಗಳ ದಿವಸದಂದು ರಾಜ್ಯದ ಗಡಿ ಪ್ರವೇಶಕ್ಕೆ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ.
ಪರೀಕ್ಷಾರ್ಥಿಗಳಿಗೆ ಕೋವಿಡ್ ಪಾಸಿಟೀವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ ಅಲ್ಲಿಯೇ ಪರೀಕ್ಷೆಗೆ ವ್ಯವಸ್ಥೆ.
ಕುಟುಂಬದಲ್ಲಿ ಯಾರಿಗಾದರೂ ಸೋಂಕು ತಗುಲಿದ್ದು, ಪರೀಕ್ಷಾರ್ಥಿ ಐಸೋಲೇಷನ್’ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಅನಾರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎಸ್’ಒಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸುವುದು. ಇದು ಡಿಸಿ, ಸಿಇಒ ಮತ್ತು ಎಸ್ ಪಿ ಜವಾಬ್ದಾರಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post