ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 11 ದಿನ ಕಳೆದಿದ್ದು, ಈ ಹಿನ್ನೆಲೆಯಲ್ಲಿ ಅವರ ಪುಣ್ಯ ಸ್ಮರಣೆ ಕಾರ್ಯ ಆರಂಭವಾಗಿದೆ.
ಭಾನುವಾರ (ನ.7) ರಾತ್ರಿಯಿಂದಲೇ ಈ ಕಾರ್ಯಕ್ಕೆ ಸಕಲ ಸಿದ್ಧತೆ ಶುರುವಾಗಿದ್ದು, ಇಂದು ಬೆಳಗ್ಗೆಯೇ ಸದಾಶಿವನಗರದಲ್ಲಿರುವ ಪುನೀತ್ ರಾಜ್‌ಕುಮಾರ್ ಅವರ ನಿವಾಸದಲ್ಲಿ ಪೂಜಾ ಕಾರ್ಯಗಳು ಆರಂಭ ಆಗಿವೆ.
11ನೇ ದಿನದ ಪೂಜೆಯಲ್ಲಿ ಅಪ್ಪು ಕುಟುಂಬದವರು ಭಾಗಿ ಆಗಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ಅಪ್ಪು ಪತ್ನಿ ಅಶ್ವಿನಿ, ಮಕ್ಕಳಾದ ಧ್ರುತಿ, ವಂದಿತಾ, ಸಹೋದರರಾದ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಸೇರಿದಂತೆ ಇಡೀ ಕುಟುಂಬದ ಸದಸ್ಯರು ಪುನೀತ್ ಸಮಾಧಿ ಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿದರು.
ವಿನಯ್ ರಾಜ್ ಕುಮಾರ್ ಚಿಕ್ಕಪ್ಪನ ಪುಣ್ಯ ತಿಥಿ ಕಾರ್ಯ ನೆರವೇರಿಸುವ ಮೂಲಕ ಕೇಶಮುಂಡನ ಮಾಡಿಸಿಕೊಂಡು ಅಗಲಿದ ಅಪ್ಪುಗೆ ಪಿಂಡ ಪ್ರದಾನ ಮಾಡಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post